ಗೋಕಾಕ:ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ : ಶಾಸಕ ಸತೀಶ
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ : ಶಾಸಕ ಸತೀಶ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 2 :
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ ಅವರ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಕರು ಶ್ರಮಿಸುವಂತೆ ಇಲ್ಲಿಯ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಸುಧಾರಣಾ ಸಮಿತಿಯ ಅಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಮಂಗಳವಾರ ಇಲ್ಲಿಯ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ 2ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಶಾಲಾ ಕೊಠಡಿ ಹಾಗೂ ಪ್ರಯೋಗಾಲಯಗಳ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ವಿದ್ಯಾಲಯಕ್ಕೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಕೋವಿಡ್-19ನಿಂದ ಅವರ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದ್ದು ಶಿಕ್ಷಕರು ಹೆಚ್ಚಿನ ಗಮನ ಹರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಂತೆ ಶಿಕ್ಷಕರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸುಧಾರಣಾ ಸಮಿತಿ ಸದಸ್ಯರಾದ ಆಯ್.ವಿ.ಕೌತನಾಳಿ, ಶ್ರೀಕಾಂತ ಕಲಾಲ, ಪ್ರಾಚಾರ್ಯ ಎ.ವಾಯ್.ಹಾದಿಮನಿ, ಶಿಕ್ಷಕರು ಹಾಗೂ ಸಿಬ್ಬಂದಿಯವರು ಇದ್ದರು.