ಗೋಕಾಕ:ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ : ಮರಡಿಮಠ ಗ್ರಾಮದ ವ್ಯಾಪ್ತಿಯಲ್ಲಿ ಘಟನೆ
ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ : ಮರಡಿಮಠ ಗ್ರಾಮದ ವ್ಯಾಪ್ತಿಯಲ್ಲಿ ಘಟನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 15 :
ತಾಲೂಕಿನ ಮರಡಿಮಠ ಗ್ರಾಮದಲ್ಲಿರುವ ಕೊಣ್ಣೂರ ಪಟ್ಟಣ ಪಂಚಾಯಿತಿ ಪಕ್ಕದಲ್ಲಿ ಕೊಳೆತ ಸ್ಥಿತಿಯಲ್ಲಿ ಅನಾಮಿಕ ಯುವಕನ ಶವವೊಂದು ಸೋಮವಾರದಂದು ಪತ್ತೆಯಾಗಿದ್ದು, ಯುವಕ ಯಾರು ಮತ್ತು ಎಲ್ಲಿಯವನು ಎಂಬುದು ಇನ್ನು ಪತ್ತೆಯಾಗಿಲ್ಲ.
ಬೆಳಗ್ಗೆ ವಾಯು ವಿಹಾರಕ್ಕೆ ಹೋಗುತ್ತಿದ್ದ ಸಾರ್ವಜನಿಕರು , ದನಗಾಹಿಗಳು ಜಾನುವಾರುಗಳನ್ನು ಮೇಯಿಸುತ್ತಿದ್ದ ವೇಳೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.