RNI NO. KARKAN/2006/27779|Sunday, May 10, 2026
You are here: Home » breaking news » ಗೋಕಾಕ:ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರಿಂದ ಏಳಪಟ್ಟಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ

ಗೋಕಾಕ:ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರಿಂದ ಏಳಪಟ್ಟಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ 

ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರಿಂದ ಏಳಪಟ್ಟಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 19 :

 
ತಾಲೂಕಿನ ಖನಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯ ಏಳಪಟ್ಟಿ ಗ್ರಾಮದಲ್ಲಿ ಹಳ್ಳಿಗಳತ್ತ ನಡಿಗೆ ಕಾರ್ಯಕ್ರಮದಡಿ ಶನಿವಾರದಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಹೇಳಿದರು.
ಅವರು ಶುಕ್ರವಾರದಂದು ನಗರದ ಮಿನಿ ವಿಧಾನ ಸೌದ ದಲ್ಲಿ ಗ್ರಾಮ ವಾಸ್ತವ್ಯದ ನಿಮಿತ್ತ ಹಮ್ಮಿಕೊಂಡ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತ ಅಂದು ಗ್ರಾಮದಲ್ಲಿ ಕುಂದುಕೊರತೆ,ಸಂವಾದ,ಕಾನೂನು ಅರಿವು,ಸಸಿ ನೆಡುವ ಕಾರ್ಯಕ್ರಮ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಲಾಗುವುದು. ಮುಂಜಾನೆ 10.30ರಿಂದ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು ಎಲ್ಲ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಾದ ಅರಣ್ಯ ವಲಯ ಅಧಿಕಾರಿ ಕೆ.ಎನ್.ವಣ್ಣೂರ, ಬಿಇಒ ಜಿ.ಬಿ.ಬಳಗಾರ, ಸಮಾಜ ಕಲ್ಯಾಣ ಅಧಿಕಾರಿ ಎಸ್.ವಿ.ಕಲ್ಲಪ್ಪನವರ, ಪಶು ಪಾಲನೆ ಅಧಿಕಾರಿ ಡಾ: ಮೋಹನ ಕಮತ, ಕೃಷಿ ಇಲಾಖೆಯ ಎಂ.ಎಂ.ನದಾಫ, ಐ.ಎಫ್. ದಪೇದಾರ, ಎಂ.ಎಲ್. ಜನ್ಮಟ್ಟಿ ಸೇರಿದಂತೆ ಅನೇಕರು ಇದ್ದರು.

Related posts: