RNI NO. KARKAN/2006/27779|Monday, August 4, 2025
You are here: Home » breaking news » ಮೂಡಲಗಿ:ದಿ. ಸುರೇಶ ಅಂಗಡಿಯವರ ಅಭಿವೃದ್ಧಿ ಕಾರ್ಯಗಳನ್ನು ಗುರ್ತಿಸಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ : ಸಂಸದ ಈರಣ್ಣ ಕಡಾಡಿ

ಮೂಡಲಗಿ:ದಿ. ಸುರೇಶ ಅಂಗಡಿಯವರ ಅಭಿವೃದ್ಧಿ ಕಾರ್ಯಗಳನ್ನು ಗುರ್ತಿಸಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ : ಸಂಸದ ಈರಣ್ಣ ಕಡಾಡಿ 

ದಿ. ಸುರೇಶ ಅಂಗಡಿಯವರ ಅಭಿವೃದ್ಧಿ ಕಾರ್ಯಗಳನ್ನು ಗುರ್ತಿಸಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ : ಸಂಸದ ಈರಣ್ಣ ಕಡಾಡಿ

 

ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಏ 9 :

 

ದಿ. ಸುರೇಶ ಅಂಗಡಿಯವರ ಅಭಿವೃದ್ಧಿ ಕಾರ್ಯಗಳನ್ನು ಗುರ್ತಿಸಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಆಯ್ಕೆ ಮಾಡುವಂತೆ ಸಂಸದ ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
ಅರಭಾಂವಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮಂಗಳಾ ಅಂಗಡಿ ಪರ ಮತಯಾಚಿಸಿ ಮಾತನಾಡಿದ ಅವರು, ಬೆಳಗಾವಿ ಸಮಗ್ರ ಅಭಿವೃದ್ಧಿಗೆ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಕೋರಿದರು.
ದಿ. ಸುರೇಶ ಅಂಗಡಿಯವರು ಬೆಳಗಾವಿ ಸಂಸದರಾಗಿ, ಕೇಂದ್ರ ರೈಲ್ವೆ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ಜನರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸ್ಪಂದಿಸುತ್ತಿದ್ದರು. ಕೇಂದ್ರ ಸಚಿವರಾಗಿ ಅಧಿಕಾರ ಸ್ವಿಕರಿಸಿದ ನಂತರ ನಾವಿಬ್ಬರೂ ದಿನಾಲು ಭೇಟಿಯಾಗಿ ಮಾತನಾಡುತ್ತಿದ್ದೇವು. ರೈತನ ಮಗನಾಗಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಬೆಳಗಾವಿ ಮತದಾರರು ತಮ್ಮನ್ನು ಪ್ರತಿ ಚುನಾವಣೆಯಲ್ಲಿ ಕೈ ಹಿಡಿದು ಸತತವಾಗಿ ಆಯ್ಕೆ ಮಾಡಿದ್ದಾರೆ. ಜನರ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದೇನೆ. ಇನ್ನೇನಿದ್ದರೂ ಜನರ ಕೆಲಸ ಮಾಡಿ ಅವರ ಋಣ ತೀರಿಸಬೇಕು ಎಂದು ಮುಕ್ತವಾಗಿ ಮಾತನಾಡಿದ್ದರು ಎಂದು ಕಡಾಡಿ ಸ್ಮರಿಸಿಕೊಂಡರು.
ರೈಲ್ವೆ ಖಾತೆಯ ಸಚಿವರಾಗಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ನಾನಾ ಯೋಜನೆಗಳನ್ನು ರೂಪಿಸಿದ್ದರು. ಬೆಳಗಾವಿ ಸ್ಮಾರ್ಟ್ ಸಿಟಿಯಲ್ಲಿ ಅವರ ಕೊಡುಗೆ ಅನನ್ಯ. ಮಂಗಳಾ ಅವರ ಗೆಲುವಿನಲ್ಲಿ ಅಂಗಡಿಯವರ ಯೋಜನೆಗಳು ವರದಾನವಾಗಲಿವೆ ಎಂದು ಹೇಳಿದರು.
ಶಾಸಕ ಬಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಚಾರ ಕಾರ್ಯದಲ್ಲಿ ನಮ್ಮೆಲ್ಲಾ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಳ್ಳುವಂತೆ ಸೂಚಿಸಿದ್ದಾರೆ. ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ನಡೆಸಿದ್ದೇವೆ. ಮಂಗಳಾ ಅಂಗಡಿಯವರನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡಲು ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳು, ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಅಂಗಡಿಯವರ ಸಾಧನೆಗಳು ಬಿಜೆಪಿ ಅಭ್ಯರ್ಥಿ ಜಯಗಳಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಶೇಖರಗೋಳ ಹೇಳಿದರು.
ಅಭ್ಯರ್ಥಿ ಮಂಗಳಾ ಅಂಗಡಿ, ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಅರಭಾಂವಿ ಮಂಡಲ ಚುನಾವಣಾ ಸಂಚಾಲಕ ಗೋವಿಂದ ಕೊಪ್ಪದ, ಮಂಡಲ ಅಧ್ಯಕ್ಷ ಮಹದೇವ ಶೆಕ್ಕಿ, ಮುಖಂಡ ಸುಭಾಸ ಕುರಬೇಟ, ಡಿ.ಕೆ ನಾಯಿಕ, ಬಸವಂತ ಕಮತಿ, ಮಹಾಂತೇಶ ಕಪ್ಪಲಗುದ್ದಿ, ಮಲ್ಲಪ್ಪ ಹೆಬ್ಬಾಳ, ಲಕ್ಷ್ಮಣ ಗಣಪ್ಪಗೋಳ, ಅಶೋಕ ಮಕ್ಕಳಗೇರಿ, ವಿಠ್ಠಲ ಪಾಟೀಲ, ಅಜೀತ ಬೆಳಕೂಡ, ಓಬಿಸಿ ಜಿಲ್ಲಾಧ್ಯಕ್ಷ ಬಸವರಾಜ ಮಾಳದವರ, ಪ್ರಕಾಶ ಮಾದರ, ಪರಪ್ಪ ಗಿರೆನ್ನವರ, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts: