RNI NO. KARKAN/2006/27779|Saturday, February 14, 2026
You are here: Home » breaking news » ಗೋಕಾಕ:ಬೆಳಗಾವಿ ಲೋಕಸಭಾ ಉಪ ಚುನಾವಣೆ : ಎರೆಡು ದಿನಗಳ ಮೊದಲು ಅಂಚೆ ಮತದಾನ ಮಾಡಿದ ಶಾಸಕ ರಮೇಶ

ಗೋಕಾಕ:ಬೆಳಗಾವಿ ಲೋಕಸಭಾ ಉಪ ಚುನಾವಣೆ : ಎರೆಡು ದಿನಗಳ ಮೊದಲು ಅಂಚೆ ಮತದಾನ ಮಾಡಿದ ಶಾಸಕ ರಮೇಶ 

ಬೆಳಗಾವಿ ಲೋಕಸಭಾ ಉಪ ಚುನಾವಣೆ : ಎರೆಡು ದಿನಗಳ ಮೊದಲು ಅಂಚೆ ಮತದಾನ ಮಾಡಿದ ಶಾಸಕ ರಮೇಶ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 17 :

 

ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸಿನಿಂದ ಸಾಗಿದ್ದು, ಈ ನಡುವೆ ಕೊರೊನಾ ಸೋಂಕಿನಿಂದ ಬಳಲುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಂಚೆ ಮತದಾನ ಮಾಡಿದ್ದಾರೆ.

ಕೊರೊನಾ ಸೋಂಕಿತರಿಗೆ ಚುನಾವಣಾ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಎರಡು ದಿನಗಳ ಹಿಂದೆಯೇ ಅಂಚೆ ಮತದಾನದ ಮೂಲಕ ಹಕ್ಕು ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಡಿ ಕೇಸ್ ನಲ್ಲಿ ಸಿಲುಕಿರುವ ರಮೇಶ್ ಜಾರಕಿಹೊಳಿ ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಚೇತರಿಸಿಕೊಳ್ಳುತ್ತಿರುವ ಜಾರಕಿಹೊಳಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

Related posts: