ಗೋಕಾಕ:ಸರಕಾರಿ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ಮೇಲೆ ಸೂಕ್ತ ಕ್ರಮಕ್ಕೆ ಜೆಸಿಐ ಆಗ್ರಹ
ಸರಕಾರಿ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ಮೇಲೆ ಸೂಕ್ತ ಕ್ರಮಕ್ಕೆ ಜೆಸಿಐ ಆಗ್ರಹ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 5 :
ಕೊರೋನಾ ಚಿಕಿತ್ಸೆಗೆ ಸಂಬಂಧಿಸಿದಂತೆ ಸರಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಇಲ್ಲಿನ ಜೆ.ಸಿ.ಐ ಸಂಸ್ಥೆಯವರು ಬುಧವಾರದದಂದು ನಗರದಲ್ಲಿ ತಹಶೀಲ್ದಾರ ಅವರಿಗೆ ಮನವಿ ಅರ್ಪಿಸಿದರು.
ಗೋಕಾಕ ನರದಲ್ಲಿ ಖಾಸಗಿ ಆಸ್ಪತ್ರೆಯವರು ಕರೋನಾ ಆಸ್ಪತ್ರೆಯನ್ನಾಗಿ ಪರಿವರ್ತಿಸಿಕೊಂಡು ಕರೋನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಕಳೆದ 15 ದಿನಗಳಿಂದ ನಗರದ ಎಲ್ಲಾ ಆಸ್ಪತ್ರೆಗಳಲ್ಲಿ ಕರೋನಾ ಪೀಡಿತ ರೋಗಿಗಳಿಗೆ ಆಕ್ಸಿಜನ್ ಬೆಡ್, ವೆಂಟಿಲೇಟರ್ ವ್ಯವಸ್ಥೆ ಇಲ್ಲ ಇಂದು ಹೇಳಿ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ. ಇದರಿಂದ ಕರೋನಾ ರೋಗಿಗಳು ಬೇರೆ ಜಿಲ್ಲೆಗಳಿಗೆ ಹೋಗಿ ಚಿಕಿತ್ಸೆ ಪಡೆಯುತ್ತಿರುವ ಜೊತೆಗೆ ಎಷ್ಟೋ ರೋಗಿಗಳು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
ಕೆಲವೊಂದು ಆಸ್ಪತ್ರೆಯವರು ಸರಕಾರ ನಿಗದಿ ಪಡಿಸಿ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ. ಹೆಚ್ಚಿನ ದರ ನೀಡಿದರು ಸಹ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲಾ ಮತ್ತು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ . ಹಾಗೆಯೇ ನಗರದಲ್ಲಿಯ ಎಲ್ಲಾ ಸ್ಕ್ಯಾನಿಂಗ್ ಸೆಂಟರಗಳಲ್ಲಿಯೂ ಸಹ ಸರಕಾರ ನಿಗದಿ ಪಡೆಸಿದ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಿ ಹಗಲು ದರೋಡೆ ಮಾಡುತ್ತಿದ್ದಾರೆ. ಈ ಎಲ್ಲಾ ಅವ್ಯವಹಾರಗಳನ್ನು ಸರಿಪಡಿಸಲು ತಾಲೂಕಾ ಟಾಸ್ಕ ಪೋರ್ಸ್ ಸಮಿತಿಯವರು ಮುತುವರ್ಜಿ ವಹಿಸಿ ಕರೋನಾ ರೋಗಿಗಳಿಗೆ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಿ ಕರೋನಾ ರೋಗಿಗಳಿಗೆ ಸರಿಯಾದ ರೀತಿಯಲ್ಲಿ ಸಹಕರಿಸಿ,ನಗರದಲ್ಲಿ ಕರೋನಾಹಾಗೂ ಜನತಾ ಕರ್ಪ್ಯೂ ಹೆಸರಿನಲ್ಲಿ ರೋಗಿಗಳಿಂದ ಸುಲಿಗೆ ಮಾಡುತ್ತಿರುವ ಖಾಸಗಿ ಆಸ್ಪತ್ರೆ ಮತ್ತು ರಕ್ತ ಸ್ಕ್ಯಾನಿಂಗ್ ಸೆಂಟರಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.
ಈ ಸಂದರ್ಭದಲ್ಲಿ ಜೆ.ಸಿ ವಿಷ್ಣು ಲಾತೂರ, ಜೆ.ಸಿ. ರಜನಿಕಾಂತ್ ಮಾಳೇದೆ, ಆರ್.ಸಿ.ಕೊಸಂದಲ್ , ಪ್ರಕಾಶ ವರ್ಜಿ, ಚಂದ್ರು ಹಳ್ಳಿ, ಎಸ್.ಆರ್.ಹವಾಲ್ದಾರ, ಸೇರಿದಂತೆ ಇತರರು ಇದ್ದರು.