ಗೋಕಾಕ:ದಿ.15 ರಂದು ಅರಭಾಂವಿ ಮತಕ್ಷೇತ್ರದ ಬೂತ್ ಮಟ್ಟದ ತರಬೇತಿ ಕಾರ್ಯಾಗಾರ : ಭರಮಣ್ಣ ಉಪ್ಪಾರ
ದಿ.15 ರಂದು ಅರಭಾಂವಿ ಮತಕ್ಷೇತ್ರದ ಬೂತ್ ಮಟ್ಟದ ತರಬೇತಿ ಕಾರ್ಯಾಗಾರ : ಭರಮಣ್ಣ ಉಪ್ಪಾರ
ಗೋಕಾಕ ಸೆ.14 : ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ವತಿಯಿಂದ ಅರಭಾಂವಿ ಮತಕ್ಷೇತ್ರದ ಬೂತ್ ಮಟ್ಟದ ತರಬೇತಿ ಕಾರ್ಯಾಗಾರ ಇದೆ. ದಿ.15 ರಂದು ಬೆಳಿಗ್ಗೆ 9.30ಕ್ಕೆ ಮಸಗುಪ್ಪಿ ಗ್ರಾಮದ ಲಕ್ಷ್ಮೀ ದೇವರ ದೇವಸ್ಥಾನ ಆವರಣದಲ್ಲಿ ನಡೆಯಲಿದೆ.
ಕಾರ್ಯಾಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ ಆರ್ ಪಾಟೀಲ, ಕರ್ನಾಟಕ ರಾಜ್ಯ ಬೆಳಗಾವಿ ಜಿಲ್ಲಾ ಉಸ್ತುವಾರಿ ಮಾಣಿಕಮ್ ಠಾಕೂರ್, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ, ರಾಜ್ಯ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಪಿ ವಿ ಮೋಹನ, ರಾಜ್ಯ ಕಾರ್ಯದರ್ಶಿ ಟಿ ಈಶ್ವರ, ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಕಾಂಗ್ರೇಸ್ ಹಲವಾರು ನಾಯಕರು ಆಗಮಿಸಲಿದ್ದಾರೆ ಎಂದು ಅರಭಾಂವಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಭರಮಣ್ಣ ಉಪ್ಪಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.