ಗೋಕಾಕ:ಮಹಾನ ನಾಯಕರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ : ಅಂಬಿರಾವ ಪಾಟೀಲ
ಮಹಾನ ನಾಯಕರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ : ಅಂಬಿರಾವ ಪಾಟೀಲ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 23 :
ದಿಟ್ಟತನದಿಂದ ಹೋರಾಟ ನಡೆಸುತ್ತಿದ್ದ ಡಾ. ಶ್ಯಾಮ ಪ್ರಸಾದ ಮುಖರ್ಜಿ ಶ್ರೇಷ್ಠ ರಾಜನೀತಿ ತಜ್ಞರಾಗಿದ್ದರು. ಯುವಕರು ಇಂತಹ ಮಹಾನ ನಾಯಕರ ತತ್ವಾದರ್ಶಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕದಿಂದ ಹಮ್ಮಿಕೊಂಡ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಭಾರತದ ಏಕತೆ, ಸಾರ್ವಭೌಮತ್ವ ಹಾಗೂ ಅಖಂಡತೆಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ. ಶ್ಯಾಮ ಪ್ರಸಾದ ಮುಖರ್ಜಿ ತಮ್ಮ ತತ್ವ ಸಿದ್ಧಾಂತಗಳಿಗಾಗಿ ಕೊನೆಯೂಸಿರಿನವರೆಗೆ ಹೋರಾಟ ನಡೆಸಿದ್ದರು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ ಭಂಡಿ, ವಿರೇಂದ್ರ ಎಕ್ಕೇರಿಮಠ, ಅಲ್ಪಸಂಖ್ಯಾತ ಮೋರ್ಚಾಧ್ಯಕ್ಷ ಮಲ್ಲಿಕಜಾನ ತಳವಾರ, ಕಾರ್ಯದರ್ಶಿ ಅಬ್ಬಾಸ ದೇಸಾಯಿ, ಎಸ್‍ಟಿ ಮೋರ್ಚಾಧ್ಯಕ್ಷ ರವಿ ಮುಡ್ಡೆಪ್ಪಗೋಳ, ರೈತ ಮೋರ್ಚಾಧ್ಯಕ್ಷ ಸುರೇಶ ಪತ್ತಾರ, ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಲ, ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.