RNI NO. KARKAN/2006/27779|Tuesday, October 14, 2025
You are here: Home » breaking news » ಗೋಕಾಕ:500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ : ಶಾಸಕ ರಮೇಶ ಮಾಹಿತಿ

ಗೋಕಾಕ:500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ : ಶಾಸಕ ರಮೇಶ ಮಾಹಿತಿ 

500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ : ಶಾಸಕ ರಮೇಶ ಮಾಹಿತಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :

 

ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 1.5 ಕೋಟಿ ವೆಚ್ಚದಲ್ಲಿ ವಿ ಎಸ್ ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿಯನ್ನು ಗುರುವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ವೀಕ್ಷಣೆ ಮಾಡಿದರು.

ನಗರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ ಸ್ಥಳ ವೀಕ್ಷಣೆ ಮಾಡಿ ಮಾತನಾಡಿದ ಶಾಸಕ ರಮೇಶ , ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ತಾಲೂಕಾ ಆಸ್ಪತ್ರೆಯಲ್ಲಿ ಪಿ ಎಸ್ ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಅಳವಡಿಸುವ‌ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಗರದ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಿದ್ದು ಬರುವ ಒಂದು ವಾರದಲ್ಲಿ ಈ ಕಾಮಗಾರಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಸಾರ್ವಜನಿಕರಿಗೆ ಇದು ಅತ್ಯಂತ ಉಪಯುಕ್ತವಾಗಲಿದೆ. ಕೊರೋನಾ ಮೂರನೇ ಅಲೆ ಎದುರಿಸಲು ಈ ಆಕ್ಸಜನ ಪ್ಲಾಂಟ್ ತುಂಬಾ ಉಪಯುಕ್ತವಾಗಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರಾದ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ತಾಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ‌.ರವೀಂದ್ರ ಅಂಟಿನ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ,ಡಾ.ಕೋಣಿ, ಡಾ. ಬಾಗಲಕೋಟೆ,ಡಾ.ಅಶೋಕ ಜಿರಗ್ಯಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Related posts: