ಗೋಕಾಕ:ನೂತನ ರೈತ ಸಂರ್ಪಕ ಕೇಂದ್ರ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ
ನೂತನ ರೈತ ಸಂರ್ಪಕ ಕೇಂದ್ರ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 19 :
ರೈತರ ಅಭಿವೃದ್ಧಿಗಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಇವುಗಳ ಸದುದ್ದೇಶದಿಂದ ರೈತರು ಆರ್ಥಿಕವಾಗಿ ಸದೃಢರಾಗಿರೆಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು
ಸೋಮವಾರದಂದು ನಗರದ ಎಪಿಎಂಸಿ ಆವರಣದಲ್ಲಿ ನೂತನ ರೈತ ಸಂರ್ಪಕ ಕೇಂದ್ರ ಮತ್ತು ಬೆಳೆ ಸಮೀಕ್ಷೆ ಮೊಬೈಲ್ ಆಪಗೆ ಚಾಲನೆ ನೀಡಿ ಮಾತನಾಡುತ್ತಾ ಕೃಷಿ ಅಧಿಕಾರಿಗಳು ಸರಕಾರದ ಸೌಲಭ್ಯಗಳನ್ನು ರೈತರಿಗೆ ತಲುಪಿಸುವದರ ಮೂಲಕ ಅವರ ಆರ್ಥಿಕ ಪ್ರಗತಿಗೆ ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಡಿ.ಎಸ್.ಪಿ ಮನೋಜಕುಮಾರ ನಾಯಕ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ಎಲ್.ಐ ರೂಡಗಿ, ಎಂ.ಎಂ. ನದಾಫ್ ಸೇರಿದಂತೆ ಇತರರು ಇದ್ದರು