ಮೂಡಲಗಿ:ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಭೇಟಿ ಪರಿಶೀಲನೆ
ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಭೇಟಿ ಪರಿಶೀಲನೆ
ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜು 22 :
ಎಸೆಸೆಲ್ಸಿ ವಿದ್ಯಾರ್ಥಿಗಳ ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಗುರುವಾರದಂದು ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದ್ದು. ಅದೇ ರೀತಿಯಾಗಿ ಗುರುವಾರದೊಂದು ಎರಡನೇ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿವೆ ಎಂದರು. ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬಂದು ಹೋಗಲು ಸ್ವಲ್ಪ ತೊಂದರೆ ಉಂಟಾಗಿದ್ದರೂ ಕೂಡ ಎಲ್ಲ ಮಕ್ಕಳು ನಿಗದಿತ ಸಮಯಕ್ಕೆ ಹಾಜರಾಗಿ ಹುರುಪಿನಿಂದ ಪರೀಕ್ಷೆಯನ್ನು ಬರೆಯುತ್ತಿದ್ದಾರೆ ಎಂದಿರುವ ಅವರು ಚಿಕ್ಕೋಡಿ ಶೈಕ್ಷಣಿಕ ವ್ಯಾಪ್ತಿಯಲ್ಲಿ ಬರುವ 221 ಪರೀಕ್ಷಾ ಕೇಂದ್ರಗಳಲ್ಲಿ ಕಳೆದ ಪರೀಕ್ಷೆಯು ಹಾಗೂ ಇವತ್ತಿನ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಕೂಡ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೊಠಡಿಯನ್ನು ಕರೆಯಲಾಗಿದ್ದು, ಸುದೈವಶಾತ್ ಯಾವುದೇ ಹಂತ ಪ್ರಕರಣಗಳು ಕಂಡುಬಂದಲ್ಲಿ ಎಂದು ತಿಳಿಸಿದರು.