RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಕಬಡ್ಡಿ ಸ್ಪರ್ಧೆಯಲ್ಲಿ ಇಂಡಿಯನ್ ಟೀಮ್ ಗೆ ಆಯ್ಕೆಯಾದ ಕ್ರೀಡಾಪಟುವಿಗೆ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ

ಗೋಕಾಕ:ಕಬಡ್ಡಿ ಸ್ಪರ್ಧೆಯಲ್ಲಿ ಇಂಡಿಯನ್ ಟೀಮ್ ಗೆ ಆಯ್ಕೆಯಾದ ಕ್ರೀಡಾಪಟುವಿಗೆ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ 

ಕಬಡ್ಡಿ ಸ್ಪರ್ಧೆಯಲ್ಲಿ ಇಂಡಿಯನ್ ಟೀಮ್ ಗೆ ಆಯ್ಕೆಯಾದ ಕ್ರೀಡಾಪಟುವಿಗೆ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 3 :

 
ಯುವ ಜನಾಂಗ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಸಾಧಕರಾಗಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಯುವ ಮುಖಂಡರಾದ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರು ಹೇಳಿದರು.
ಮಂಗಳವಾರದಂದು ನಗರದ ಕೆಪಿಸಿಸಿ ಕಾರ್ಯಾದ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನೇಪಾಳ ದೇಶದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಇಂಡಿಯನ್ ಟೀಮ್‍ಗೆ ಆಯ್ಕೆಯಾದ ತಾಲೂಕಿನ ತಪಶಿ ಗ್ರಾಮದ ಮಲ್ಲಪ್ಪಾ ನಾಯಿಕ, ಮೆಳವಂಕಿ ಗ್ರಾಮದ ಸಿದ್ದಪ್ಪ ಹಂಜಿ ಇವರಿಗೆ ಪ್ರೋತ್ಸಹ ಧನವನ್ನು ನೀಡಿ ಮಾತನಾಡುತ್ತಿದ್ದರು.
ಕ್ರೀಡಾ ಕ್ಷೇತ್ರದಲ್ಲೂ ಹೆಚ್ಚಿನ ಉದ್ಯೋಗಾವಕಾಶಗಳಿದ್ದು, ಕ್ರೀಡೆಗಳಲ್ಲಿ ಪಾಲ್ಗೊಂಡು ಸಾಧಕರಾಗಿ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ. ಇದಕ್ಕೆ ನಮ್ಮ ಪ್ರೋತ್ಸಹ, ಸಹಕಾರ ಸದಾ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ರಾಯಪ್ಪಾ ಹಂಜಿ, ಮಹಾದೇವ ಪತ್ತಾರ ಇದ್ದರು.

Related posts: