RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಎ.ಬಿ. ಮಲ್ಬನ್ನವರ

ಗೋಕಾಕ:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಎ.ಬಿ. ಮಲ್ಬನ್ನವರ 

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಎ.ಬಿ. ಮಲ್ಬನ್ನವರ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :

 

ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ ಎಂದು ಬಿಸಿಯೂಟ ಯೋಜನಾ ಸಹಾಯಕ ನಿರ್ದೇಶಕ ಎ.ಬಿ. ಮಲ್ಬನ್ನವರ ಹೇಳಿದರು.
ಅವರು ಮಂಗಳವಾರದಂದು ತಾಲೂಕಿನ ಕೊಳವಿ ಗ್ರಾಮದಲ್ಲಿ ನೂತನ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಇಂದಿನ ತಾಂತ್ರಿಕ ಯುಗದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತಿದೆ. ಶಾಸಕರ ಪ್ರಯತ್ನದಿಂದ ತಾಲೂಕಿಗೆ ಆರು ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲಾಗುತ್ತದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೂ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಅನುಕೂಲವಾಗುತ್ತದೆ. ಇದರ ಸದುಪಯೋಗದಿಂದ ಪಾಲಕರು ಮಕ್ಕಳಿಗೆ ಶಿಕ್ಷಣ ನೀಡಿ, ಅವರ ಬದುಕನ್ನು ಉಜ್ವಲಗೊಳಿಸುವಂತೆ ಕರೆ ನೀಡಿದರು.
ಶಾಲಾ ಉದ್ಘಾಟನಾ ಕಾರ್ಯಕ್ರಮವನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ, ಮಡ್ಡೇಪ್ಪ ತೋಳಿನವರ, ಶಿಕ್ಷಣ ಇಲಾಖೆಯ ವಿಜಯ ಖನಗಾಂವಿ, ಕೆ.ಕೆ.ಹುಳೇಕರ, ಪ್ರಧಾನ ಗುರು ಬಿ.ಎಂ.ಶಿವಾಪೂರ, ಮುಖಂಡರಾದ ಶಿವಾನಂದ ಮಮದಾಪೂರ, ಕರೇಪ್ಪ ಬಡಿಗವಾಡ, ರಾಮಣ್ಣ ಖಾನಪೂರ ಸೇರಿದಂತೆ ಅನೇಕರು ಇದ್ದರು.

Related posts: