ಬೆಳಗಾವಿ:ಪಾಲಿಕೆ ಚುನಾವಣೆ : ಕಾಂಗ್ರೆಸ್ ಹಿನಾಯ ಸೋಲು, ಬಿಜೆಪಿಗೆ ಸ್ವಷ್ಟ ಬಹುಮತ
ಪಾಲಿಕೆ ಚುನಾವಣೆ : ಕಾಂಗ್ರೆಸ್ ಹಿನಾಯ ಸೋಲು, ಬಿಜೆಪಿಗೆ ಸ್ವಷ್ಟ ಬಹುಮತ
ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಸೆ 6 :
ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದೆ.
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 36 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದು, ಮೊದಲ ಬಾರಿಗೆ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಂತಾಗಿದೆ. ಈ ಮೂಲಕ ನಾಡದ್ರೋಹಿ ಎಂಇಎಸ್ ಪುಂಡಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಂತಾಗಿದೆ.
ಒಟ್ಟು 58 ವಾರ್ಡಗಳಲ್ಲಿ ಬಿಜೆಪಿ 36, ಕಾಂಗ್ರೆಸ್ 9, ಎಂಇಎಸ್ 2, ಪಕ್ಷೇತರ 10 ಹಾಗೂ ಎಐಎಂಐಎಂ 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಬಿಜೆಪಿ ವಿಜಯೋತ್ಸವದ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ನೂಕು ನುಗ್ಗಲಿನಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೈಕ್ ಗಳು ಜಖಂಗೊಂಡಿವೆ ಎಂದು ಮೂಲಗಳು ತಿಳಿಸಿವೆ.