RNI NO. KARKAN/2006/27779|Sunday, July 13, 2025
You are here: Home » breaking news » ಗೋಕಾಕ:ದೇಶವನ್ನು ಬಲಿಷ್ಠಗೋಳಿಸುತ್ತಿರುವ ಧೀಮಂತ ಪ್ರಧಾನಿ ನರೇಂದ್ರ ಮೋದಿ : ಶಾಸಕ ರಮೇಶ ಜಾರಕಿಹೊಳಿ

ಗೋಕಾಕ:ದೇಶವನ್ನು ಬಲಿಷ್ಠಗೋಳಿಸುತ್ತಿರುವ ಧೀಮಂತ ಪ್ರಧಾನಿ ನರೇಂದ್ರ ಮೋದಿ : ಶಾಸಕ ರಮೇಶ ಜಾರಕಿಹೊಳಿ 

ದೇಶವನ್ನು ಬಲಿಷ್ಠಗೋಳಿಸುತ್ತಿರುವ ಧೀಮಂತ ಪ್ರಧಾನಿ ನರೇಂದ್ರ ಮೋದಿ : ಶಾಸಕ ರಮೇಶ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 17 :

 

ದೂರದೃಷ್ಟಿ ಯೋಜನೆಯ ನೇತಾರರಾಗಿ ದೇಶವನ್ನು ಬಲಿಷ್ಠಗೋಳಿಸುತ್ತಿರುವ ಧೀಮಂತ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ದೇಶವನ್ನು ವಿಶ್ವಗುರು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನಾರಣೆ ನಿಮಿತ್ಯ ನಗರದ ಮಯೂರ ಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು
ಪ್ರಧಾನಿಯಾಗಿ ಕಳೆದ 7 ವರ್ಷಗಳಿಂದ ವಿಶ್ರಮಿಸದೆ ವಿವಿಧ ಯೋಜನೆಗಳಿಂದ ದೇಶವನ್ನು ಮುನ್ನಡೆಸುತ್ತಿದ್ದಾರೆ. ನರೇಂದ್ರ ಮೋದಿ ದೇಶ ಕಂಡ ಅಪ್ರತಿಮ ನಾಯಕ, ವಿಶ್ವದ ಹಲವರು ಪ್ರಮುಖ ನಾಯಕರ ಪೈಕಿ ಒಬ್ಬರಾಗಿ ಗಮನ ಸೆಳೆದಿದ್ದಾರೆ. ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ಭಾರತ ಧಿಕ್ಕೇ ಬದಲಾಗಿದೆ, ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ. ದೇಶದ ರಕ್ಷಣೆ, ಆರ್ಥಿಕ ವ್ಯವಸ್ಥೆ, ಸಾಮಾಜಿಕ ಹಾಗು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಚಾಪು ಮೂಡಿಸಿರುವ ಅವರು ದೇಶವನ್ನು ಮುನ್ನಡೆಸುವ ದಿಟ್ಟನಾಯಕರೆನಿಸಿಕೊಂಡಿದ್ದಾರೆ. ಇಡೀ ಜಗತ್ತೇ ಮೆಚ್ಚುವಂತೆ ದೇಶವನ್ನು ಮುನ್ನಡೆಸುತ್ತಿರುವ ಮೋದಿ ಅವರು ದೇಶದ ದಿಟ್ಟನಾಯಕರು.ಅವರ ಮಹಾನ ನಾಯಕತ್ವಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಕೋರಿದರು.
ಇದೇ ಸಂದರ್ಭದಲ್ಲಿ ಶಾಸಕ ರಮೇಶ ಅವರು ಬಡವರಿಗೆ ಹಣ್ಣು- ಹಂಪಲ ವಿತರಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್, ಸುರೇಶ ಪಾಟೀಲ, ಶಾಮಾನಂದ ಪೂಜೇರಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ,ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ,ಪೌರಾಯುಕ್ತ ಶಿವಾನಂದ ಹಿರೇಮಠ, ತಾಲೂಕಾ ವೈದ್ಯಾಧಿಕಾರಿ ಡಾ.ಎಂ.ಎಸ್.ಕೊಪ್ಪದ, ಡಾ.ರವೀಂದ್ರ ಅಂಟಿನ, ಶಶಿಧರ ದೇಮಶೇಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: