ಗೋಕಾಕ:ನಟ ಪುನೀತ್ ರಾಜಕುಮಾರ ಅಕಾಲಿಕ ನಿಧನ : ಕಸಾಪ ಚುನಾವಣೆ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಮುಂದುಡಿಕೆ : ಖಾನಪ್ಪನವರ
ನಟ ಪುನೀತ್ ರಾಜಕುಮಾರ ಅಕಾಲಿಕ ನಿಧನ : ಕಸಾಪ ಚುನಾವಣೆ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಮುಂದುಡಿಕೆ : ಖಾನಪ್ಪನವರ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 29 :
ಕನ್ನಡ ಚಿತ್ರರಂಗದ ಮೇರು ನಟ ಪುನೀತ್ ರಾಜಕುಮಾರ ಅಕಾಲಿಕ ನಿಧನದಿಂದ ನಾಳೆ ದಿನಾಂಕ 30 ರಂದು ನಡೆಯಬೇಕಿದ್ದ ಕಸಾಪ ಚುನಾವಣೆ ಪ್ರಣಾಳಿಕೆ ಬಿಡುಗಡೆ ಸಮಾರಂಭವನ್ನು ರದ್ದು ಪಡೆಸಿ ನವೆಂಬರ್ 2 ರಂದು ಮುಂಜಾನೆ 11 ಘಂಟೆಗೆ ನಡೆಸಲಾಗುವದು ಎಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣಾ ಅಭ್ಯರ್ಥಿ ಬಸವರಾಜ ಖಾನಪ್ಪನವರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕನ್ನಡ ಚಿತ್ರರಂಗದ ದೃವತಾರೆ ಪುನೀತ್ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ. ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ, ಕನ್ನಡಕ್ಕೆ, ನಾಡು ನುಡಿಗೆ ಭರಿಸಲಾಗದ ನಷ್ಟ. ಅವರ ನಿಧನ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ನಮೆಲ್ಲರ ಅಪ್ಪು ಇನ್ನಿಲ್ಲ ಎನ್ನುವ ಸ್ಥಿತಿಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನೀಡಲಿ ಎಂದು ಖಾನಪ್ಪನವರ ಸಂತಾಪ ಸೂಚಿಸಿದ್ದಾರೆ.