ಬೆಳಗಾವಿ:ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ : ಭಾರಿ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶನ
ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ : ಭಾರಿ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶನ
ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ನ 23 :
ಬೆಳಗಾವಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಬಂದ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಕಾಂಗ್ರೆಸ್‌ನಿಂದ ಚನ್ನರಾಜ್ ಹಟ್ಟಿಹೊಳಿ ಕೂಡಾ ನಾಮಪತ್ರ ಸಲ್ಲಿಸಿರುವದರಿಂದ ಈ ಬಾರಿಯ ಪರಿಷತ್ ಚುನಾವಣೆ ತುಂಬಾ ಕಾವು ಪಡೆದುಕೊಂಡಿದೆ.
ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಲಖನ್ ಬೆಂಬಲಿಗರು ನೂರಾರು ವಾಹನಗಳಲ್ಲಿ ಬಂದು ಬೆಂಬಲ ಸೂಚಿಸುವದರಿಂದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಕೊಲಾಹಲ ಉಂಟಾಗಿದೆ. ಲಖನ ಜಾರಕಿಹೊಳಿ ಅವರ ನಾಮಪತ್ರ ಸಲ್ಲಿಕೆ ವೇಳೆ ರಮೇಶ ಜಾರಕಿಹೊಳಿ ಅವರ ಅಳಿಯ ಅಂಬಿರಾವ ಪಾಟೀಲ , ವಿಧಾನ ಪರಿಷತ್ ಮಾಜಿ ಸದಸ್ಯ ವಿವೇಕರಾವ ಪಾಟೀಲ , ಶಾಸಕ ರಮೇಶ ಜಾರಕಿಹೊಳಿ ಅವರ ಕಿರಿಯ ಸುಪುತ್ರ ಕೆಎಂಎಫ್ ನಿರ್ದೇಶಕ ಅರಮನಾಥ ಜಾರಕಿಹೊಳಿ ಉಪಸ್ಥಿತರಿದ್ದರು,