RNI NO. KARKAN/2006/27779|Thursday, April 30, 2026
You are here: Home » breaking news » ಗೋಕಾಕ:ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವೀತಿಯ ಸ್ಥಾನ

ಗೋಕಾಕ:ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವೀತಿಯ ಸ್ಥಾನ 

ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು  ದ್ವೀತಿಯ ಸ್ಥಾನ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 3 :
ಪದವಿ ಪೂರ್ವ ಶಿಕ್ಷಣ ಇಲಾಖೆಯವರು ತಾಲೂಕಿನ ಘಟಪ್ರಭಾದಲ್ಲಿ ಎಸ್‍ಡಿಟಿ ಪಿಯೂ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ಬಾಲಕಿಯರ ತಂಡ ಪ್ರಥಮ ಹಾಗೂ ಬಾಲಕರ ತಂಡ ದ್ವೀತಿಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಚೇರಮನ ಡಾ. ಭೀಮಶಿ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ಪ್ರಾಚಾರ್ಯ ಅರುಣ ಪೂಜೇರ, ಉಪನ್ಯಾಸಕ ಎನ್ ಕೆ ಮಿರಾಶಿ, ದೈಹಿಕ ಶಿಕ್ಷಣ ನಿರ್ದೇಶಕ ಎಸ್ ಬಿ ಬಾಗಾಯಿ ಹಾಗೂ ಸಿಬ್ಬಂಧಿ ಅಭಿನಂದಿಸಿದರು.


 

Related posts: