RNI NO. KARKAN/2006/27779|Tuesday, May 5, 2026
You are here: Home » breaking news » ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳ ಬಂಧನ

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳ ಬಂಧನ 

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು  ಆರೋಪಿಗಳ ಬಂಧನ

ಹುಬ್ಬಳ್ಳಿ ಸೆ 22: ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೋಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶ್ವಸಿಯಾಗಿದ್ದಾರೆ

ರಾಕೇಶ್ ಕಠಾರೆ, ಮಂಜುನಾಥ ಕಠಾರೆ ಬಂಧಿತ ಆರೋಪಿಗಳು. ಇವರಿಬ್ಬರು ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಸುಂದರಪುರಮ್ ಲೇಔಟ್‌ನ ಸುಂದರ್ ರೆಸಿಡೆನ್ಸಿಯಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. 

ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ಪಂದ್ಯದ ವೇಳೆ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಇನ್ಸ್‌ಪೆಕ್ಟರ್ ಎಸ್.ಎಸ್. ಹಿರೇಮಠ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು

ಬುಕ್ಕಿಗಳಿಂದ 6 ಮೊಬೈಲ್, ಒಂದು ಲೈನ್ ಮಷಿನ್, ಟಿವಿ, ನಗದು ಜಪ್ತಿ ಮಾಡಲಾಗಿದೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts: