RNI NO. KARKAN/2006/27779|Thursday, January 15, 2026
You are here: Home » breaking news » ಬೆಳಗಾವಿ:ಎಂಇಎಸ್ ಮುಖಂಡನ ಮುಖಕ್ಕೆ ಮಸಿ ಬಳಿದ ಧೀರ ಕನ್ನಡಿಗರು

ಬೆಳಗಾವಿ:ಎಂಇಎಸ್ ಮುಖಂಡನ ಮುಖಕ್ಕೆ ಮಸಿ ಬಳಿದ ಧೀರ ಕನ್ನಡಿಗರು 

ಎಂಇಎಸ್ ಮುಖಂಡನ ಮುಖಕ್ಕೆ ಮಸಿ ಬಳಿದ ಧೀರ ಕನ್ನಡಿಗರು

ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಡಿ 13 :

ಚಳಿಗಾಲದ ಅಧಿವೇಶನದ ಬೆನ್ನಲ್ಲೇ ನಗರದಲ್ಲಿ ಮಹಾಮೇಳಾವ ನಡೆಸಲು ಯತ್ನಿಸಿದ ಎಂಇಎಸ್‍ಗೆ ಕನ್ನಡ ಕಾರ್ಯಕರ್ತರು ತಕ್ಕ ಪಾಠ ಕಲಿಸಿದ್ದಾರೆ. ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ.

ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕರ್ನಾಟಕ ನವನಿರ್ಮಾಣ ಸೇನೆ ಯುವ ಘಟಕದ ಅಧ್ಯಕ್ಷ ಸಂತಪ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಘಟನೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿಗೆ ಯತ್ನಿಸಿದರು. ಇದೇ ವೇಳೆ ಪೊಲೀಸರು ಹಾಗೂ ಎಂಇಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆಯಿತು.

ಎಂಇಎಸ್ ಮುಖಂಡನ ಮೇಲೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ , ಘಟನೆ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳುತ್ತೇವೆ. ಮಸಿ ಬಳಿದ ಯುವಕನನ್ನು ಅರೆಸ್ಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ

Related posts: