ಗೋಕಾಕ:ಕಾರ್ಮಿಕ ಇಲಾಖೆ ಹಮ್ಮಿಕೊಂಡ ಆರೋಗ್ಯ ತಪಾಸಣೆಗೆ ಶಿಬಿರಕ್ಕೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ
ಕಾರ್ಮಿಕ ಇಲಾಖೆ ಹಮ್ಮಿಕೊಂಡ ಆರೋಗ್ಯ ತಪಾಸಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 3 :
ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಅವರ ಅವಲಂಬಿತರಿಗೆ ಹಮ್ಮಿಕೊಳ್ಳಲಾದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ ಗುರುವಾರದಂದು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರುಗಳಾದ ಟಿ.ಆರ್.ಕಾಗಲ, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಕಾರ್ಮಿಕ ನಿರೀಕ್ಷಕ ಪಾಂಡುರಂಗ ಮಾವರಕರ,
ಮುಖಂಡರಾದ ವಿಜಯ ಜತ್ತಿ, ಬಸವರಾಜ ದೇಶನೂರ , ದುರ್ಗಪ್ಪಶಾಸ್ತ್ರಿ ಗೋಲ್ಲರ ಸೇರಿದಂತೆ ಅನೇಕರು ಇದ್ದರು.