RNI NO. KARKAN/2006/27779|Wednesday, September 18, 2024
You are here: Home » breaking news » ಗೋಕಾಕ:ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸುವ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭ : ಶಾಸಕ ರಮೇಶ

ಗೋಕಾಕ:ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸುವ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭ : ಶಾಸಕ ರಮೇಶ 

ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸುವ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭ : ಶಾಸಕ ರಮೇಶ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 27 :

 
ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಗುವ ಸಕಲ ಸೌಲಭ್ಯಗಳನ್ನು ದೊರೆಯುತ್ತಿದ್ದು, ಇನ್ನೂ ಹೆಚ್ಚಿನ ಅನುಕೂಲವಾಗಲು ಈಗಿರುವ 100 ಹಾಸಿಗೆ ಆಸ್ಪತ್ರೆಯನ್ನು 250 ಕ್ಕೆ ಏರಿಸಲು ಕ್ರಮ ಜರುಗಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಆರೋಗ್ಯವಂತ ಸಮಾಜ ನಿರ್ಮಿಸಲು ಸ‌ಹಕರಿಸಬೇಕೆಂದು ಮನವಿ ಮಾಡಿದರು.

ಎಲ್ಲಾ ತಾಯಂದಿರು ತಮ್ಮ 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಫಲ್ಸ್ ಪೊಲೀಯೋ ಹಾಕಿಸಿ ಪೊಲೀಯೋ ಮುಕ್ತ ಭಾರತ ನಿರ್ಮಿಸಲು ಸಹಕರಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ.ಎಸ್.ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಇಒ ಜಿ.ಬಿ‌.ಬಳಗಾರ, ಡಾ.ಎಂ.ಎಂ ಕೋಣಿ, ಡಾ.ಬಿ.ಎ. ಬಾಗಲಕೋಟೆ, ಡಾ.ದೀಪಾ ತುಬಾಕಿ, ಡಾ. ಅಂಗಡಿ, ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ, ದಿಲೀಪ್ ಮೆಳವಂಕಿ, ಪರಮೇಶಿ ಗುಲ್ ಸೇರಿದಂತೆ ನಗರಸಭೆ ಸದಸ್ಯರು ಉಪಸ್ಥಿತರಿದ್ದರು.

Related posts: