RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ನಾವು ಆಚರಿಸುವ ನಂಬಿಕೆಗಳ ಹಿಂದಿನ ವೈಜ್ಞಾನಿಕ ಸತ್ಯವನ್ನು ಅರಿತು ಅವುಗಳನ್ನು ಆಚರಿಸಿ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ

ಗೋಕಾಕ:ನಾವು ಆಚರಿಸುವ ನಂಬಿಕೆಗಳ ಹಿಂದಿನ ವೈಜ್ಞಾನಿಕ ಸತ್ಯವನ್ನು ಅರಿತು ಅವುಗಳನ್ನು ಆಚರಿಸಿ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ 

ನಾವು ಆಚರಿಸುವ ನಂಬಿಕೆಗಳ ಹಿಂದಿನ ವೈಜ್ಞಾನಿಕ ಸತ್ಯವನ್ನು ಅರಿತು ಅವುಗಳನ್ನು ಆಚರಿಸಿ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 1 :

 

ನಾವು ಆಚರಿಸುವ ನಂಬಿಕೆಗಳ ಹಿಂದಿನ ವೈಜ್ಞಾನಿಕ ಸತ್ಯವನ್ನು ಅರಿತು ಅವುಗಳನ್ನು ಆಚರಿಸುವಂತೆ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು.
ಸೋಮವಾರದಂದು ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ವಿವಿಧ ಪ್ರೌಢಶಾಲೆಗಳು ಹಾಗೂ ರೋಟರಿ ಸಂಸ್ಥೆಯ ಸಹಯೋಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ನಿಮಿತ್ತ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ದ್ರೋಣ ಹಾರಾಟ ಸ್ವರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವೈಜ್ಞಾನಿಕ ಮನೋಭಾವಗಳನ್ನು ಬೆಳೆಸಿಕೊಳ್ಳುವದರಿಂದ ಮೂಢನಂಬಿಕೆಗಳನ್ನು ತಡೆಗಟ್ಟಲು ಸಾಧ್ಯ ವಿದ್ಯಾರ್ಥಿಗಳು ವಿಜ್ಞಾನ ವಿಷಯಕ್ಕೆ ಹೆಚ್ಚಿನ ಮಹತ್ವ ನೀಡಿ ವೈಜ್ಞಾನಿಕ ಕ್ಷೇತ್ರದಲ್ಲಿ ದೇಶವನ್ನು ಮುನ್ನಡೆಸುವಂತೆ ಕರೆ ನೀಡಿದರು.

ಇದೆ ಸಂದರ್ಭದಲ್ಲಿ ಸ್ವರ್ಧೆಯ ವಿಜೇತರಿಗೆ ಗಣ್ಯರಿಂದ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ, ಸೋಮಶೇಖರ್ ಮಗದುಮ್ಮ, ದಿಲೀಪ್ ಮೆಳವಂಕಿ, ಗೋಕಾಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ್ ಕಡಕೋಳ, ಕಾರ್ಯದರ್ಶಿ ಆರ್.ಎಂ ವಾಲಿ, ಮುಖ್ಯೋಪಾಧ್ಯಾಯರುಗಳಾದ ಎಸ್.ಎಸ್. ಈಜೇರಿ, ವಾಯ್.ಎ.ಹನಗಂಡಿ, ಎಸ್.ಕೆ ಮಠದ ಇದ್ದರು.

Related posts: