RNI NO. KARKAN/2006/27779|Monday, August 4, 2025
You are here: Home » breaking news » ಗೋಕಾಕ:ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಶ್ರಮಿಸಿ : ನಾಗಪ್ಪ ಶೇಖರಗೋಳ

ಗೋಕಾಕ:ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಶ್ರಮಿಸಿ : ನಾಗಪ್ಪ ಶೇಖರಗೋಳ 

ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಶ್ರಮಿಸಿ : ನಾಗಪ್ಪ ಶೇಖರಗೋಳ

ಗೋಕಾಕ.ಸೆ 25: ಪಂ. ದೀನ ದಯಾಳ ಉಪಾಧ್ಯೆ ಅವರ ಜನ್ಮ ವರ್ಷಾಚರಣೆ ನಿಮಿತ್ಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದ್ದು,ಇವುಗಳ ಸದುಪಯೋಗಕ್ಕೆ ಕಾರ್ಯಕರ್ತರು ಶ್ರಮಿಸಿ,ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುವಂತೆ ಯುವ ಧುರೀಣ ನಾಗಪ್ಪ ಶೇಖರಗೋಳ ತಿಳಿಸಿದರು.
ಸೋಮವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ಪಂ. ದೀನ ದಯಾಳ ಉಪಾಧ್ಯೆ ಜನ್ಮ ಶತಮಾನೋತ್ಸವ ಸಮಾಪನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಪಂ. ಉಪಾಧ್ಯೆ ಹಾಗೂ ಶ್ಯಾಮಪ್ರಸಾದ ಮುಖರ್ಜಿಯವರ ತ್ಯಾಗ ಹಾಗೂ ಪರಿಶ್ರಮದ ಫಲವಾಗಿ ಬಿಜೆಪಿ ಹುಟ್ಟಿಕೊಂಡಿತು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಭಾರತ ದೇಶ ಪ್ರಗತಿಯತ್ತ ದಾಪುಗಾಲು ಹಾಕುತ್ತಿದೆ ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವ ಕಾರಣವೆಂದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, 150+ ಮಿಷನ್ ಯೋಜನೆಯ ಯಶಸ್ಸಿಗೆ ಕಾರ್ಯಕರ್ತರು ದುಡಿಯುವಂತೆ ತಿಳಿಸಿದರು.

ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರದ್ದು ಎಂದು ಶೇಖರಗೋಳ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಭಾಂವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಶ ಪಾಟೀಲ ವಹಿಸಿದ್ದರು.

ಯುವ ಧುರೀಣ ನಿಂಗಪ್ಪ ಕುರಬೇಟ, ಬಿಜೆಪಿ ಪದಾಧಿಕಾರಿಗಳಾದ ಸುನೀಲ ಜಮಖಂಡಿ, ಲಕ್ಕಪ್ಪ ಅವರಾದಿ,ಬಸು ಕೋಣಿ, ಮೂಡಲಗಿ ಪುರಸಭೆ ಮಾಜಿ ಅಧ್ಯಕ್ಷ ರವಿ ಸಣ್ಣಕ್ಕಿ, ಉದ್ಯಮಿ ಬಸವರಾಜ ಹತ್ತರಕಿ, ಭೂತಪ್ಪ ಗೋಡೆರ, ತಾಪಂ ಮಾಜಿ ಸದಸ್ಯ ಬಿ.ಬಿ.ಪೂಜೇರಿ, ಮನ್ನಿಕೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಾಳಪ್ಪ ಗೌಡರ, ಪರಸಪ್ಪ ಉಪ್ಪಾರ,ಅರಭಾಂವಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts: