RNI NO. KARKAN/2006/27779|Saturday, July 27, 2024
You are here: Home » breaking news » ಗೋಕಾಕ:ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಜಯಂತಿ ಅದ್ದೂರಿಯಾಗಿ ಆಚರಿಸಲು ನಿರ್ಧಾರ : ಪ್ರಕಾಶ ಹೋಳೆಪ್ಪಗೋಳ

ಗೋಕಾಕ:ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಜಯಂತಿ ಅದ್ದೂರಿಯಾಗಿ ಆಚರಿಸಲು ನಿರ್ಧಾರ : ಪ್ರಕಾಶ ಹೋಳೆಪ್ಪಗೋಳ 

ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಜಯಂತಿ ಅದ್ದೂರಿಯಾಗಿ ಆಚರಿಸಲು  ನಿರ್ಧಾರ : ಪ್ರಕಾಶ ಹೋಳೆಪ್ಪಗೋಳ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 29 : 

ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್  ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು  ನಿರ್ಧರಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ  ಹೇಳಿದರು.
ಮಂಗಳವಾರದಂದು ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ  ಜರುಗಿದ ಉಭಯ ನಾಯಕರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು,

ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನರಾಂ ಅವರ ಜಯಂತಿ ಏಪ್ರಿಲ್ 5 ರಂದು ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವಿದೆ. ಉಭಯ ನಾಯಕರ ಜಯಂತಿಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಕುರಿತಂತೆ ಸಮಾಜದ ಮುಖಂಡರ ಸಲಹೆಗಳನ್ನು ಸ್ವೀಕರಿಸಿ ಉಭಯ ನಾಯಕರ ಜಯಂತಿಗಳನ್ನು ವ್ಯವಸ್ಥಿತವಾಗಿ ಸಂಘಟಿಸುವ ಕುರಿತಂತೆ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಲಾಗುವುದು ಎಂದು  ತಿಳಿಸಿದರು. ಎಪ್ರೀಲ್ 5 ರಂದು ನಗರದ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಮುಂಜಾನೆ 9 ಘಂಟೆಗೆ  ಡಾ‌.ಬಾಬು ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವದು ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನ ರಾಮ್ ಅವರ ಬಗ್ಗೆ ಜನರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗುವದು ಎಂದರು .
ಎಪ್ರೀಲ್ 14 ರಂದು ಜರಗುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತವಾಗಿ ಮುಂಜಾನೆ 9 ಘಂಟೆಗೆ ನಗರದ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು  ವಿತರಿಸಲಾಗುವುದು. 9:30ಕ್ಕೆ ನಗರದ ಮಿನಿ ವಿಧಾನಸಭಾ ಆವರಣದಲ್ಲಿ ಇರುವ ಅಂಬೇಡ್ಕರ್ ಪುಥ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ನರಗದ ಪ್ರಮುಖ ಬೀದಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಭವ್ಯ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಜಾಂಜ  ಪದಕ , ಸ್ಕೌಟ್ಸ್ ಮತ್ತು ಗೈಡ್ಸ್  ವಿದ್ಯಾರ್ಥಿಗಳು ಭಾಗವಹಿಸುವರು . 10:30ಕ್ಕೆ ನಗರದ ಸಮುದಾಯ ಭವನದಲ್ಲಿ ಜರಗುವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕುರಿತು ವಿಶೇಷ ಉಪನ್ಯಾಸ ,ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಗುರುತಿಸಿ  ಸತ್ಕರಿಸಿ ,ಗೌರವಿಸಲಾಗುವದು. ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಉಭಯ ಮಹಾತ್ಮರ ಜಯಂತಿ ಕಾರ್ಯಕ್ರಮವನ್ನು ಯಶಸ್ವಿ ಮಾಡಬೇಕೆಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ, ಪೌರಾಯುಕ್ತ  ಶಿವಾನಂದ ಹಿರೇಮಠ, ಸಮಾಜ ಕಲ್ಯಾಣ ಅಧಿಕಾರಿ ಎಸ್.ವ್ಹಿ ಕಲ್ಲಪ್ಪನವರ, ತಾ.ಪಂ ಸಹಾಯಕ ನಿರ್ದೇಶಕ ದೇಸಾಯಿ , ಮುಖಂಡರಾದ ಬಬಲೇಪ್ಪ ಮಾದರ, ಬಾಳೇಶ ಸಂತವ್ವಗೋಳ, ಗೋವಿಂದ ಕಳ್ಳಿಮನಿ ಉಪಸ್ಥಿತರಿದ್ದರು .

Related posts: