RNI NO. KARKAN/2006/27779|Monday, April 21, 2025
You are here: Home » breaking news » ಗೋಕಾಕ:ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅವರ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ : ಅಧ್ಯಕ್ಷ ಎಂ.ಶಿವಣ್ಣ

ಗೋಕಾಕ:ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅವರ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ : ಅಧ್ಯಕ್ಷ ಎಂ.ಶಿವಣ್ಣ 

ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅವರ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ : ಅಧ್ಯಕ್ಷ ಎಂ.ಶಿವಣ್ಣ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 24 :

 
ರಾಜ್ಯದ ಎಲ್ಲಾ ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅವರ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಹೇಳಿದರು.

ರವಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ನಗರಸಭೆಯ ಪೌರ ಕಾರ್ಮಿಕರ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ ಗುತ್ತಿಗೆ ಕಾರ್ಮಿಕರನ್ನು ಕಾಯಂ ಗೊಳಿಸಲು ಸೇರಿದಂತೆ ಇತರ ಸೌಲಭ್ಯಗಳನ್ನು ಕಲ್ಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ಮತ್ತು ಗೋಕಾಕನ ಎಲ್ಲಾ ಕಾರ್ಮಿಕರ ಸಭೆ ಕರೆದು ಸಮಸ್ಯೆಗಳನ್ನು ಚರ್ಚಿಸಲಾಗುವುದು. ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣ ಹಾಗೂ ತಮ್ಮ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿ ಎಂದ ಅವರು ಸರಕಾರದ ಸೌಲಭ್ಯಗಳ ಸದುಪಯೋಗದಿಂದ ನೆಮ್ಮದಿ ಜೀವನ ಸಾಗಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಪರಿಸರ ಅಭಿಯಂತ ಎಂ.ಎಚ್.ಗಜಾಕೋಶ, ಸಮಾಜ ಕಲ್ಯಾಣ ಅಧಿಕಾರಿ ಎಸ್.ವ್ಹಿ.ಕಲ್ಲಪ್ಪನವರ, ಕಛೇರಿ ಅಧೀಕ್ಷ ರವೀಂದ್ರ ತಳವಾರ ಹಾಗೂ ಪೌರ ಕಾರ್ಮಿಕರು ಇದ್ದರು.

Related posts: