RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ನೌಕರರ ದಿನಾಚರಣೆ ಹಾಗೂ ಮೇ.1 ಕಾರ್ಮಿಕ ದಿನಾಚರಣೆ ಅಂಗವಾಗಿ ಸತ್ಕಾರ ಸಮಾರಂಭ

ಗೋಕಾಕ:ನೌಕರರ ದಿನಾಚರಣೆ ಹಾಗೂ ಮೇ.1 ಕಾರ್ಮಿಕ ದಿನಾಚರಣೆ ಅಂಗವಾಗಿ ಸತ್ಕಾರ ಸಮಾರಂಭ 

ನೌಕರರ ದಿನಾಚರಣೆ ಹಾಗೂ ಮೇ.1 ಕಾರ್ಮಿಕ ದಿನಾಚರಣೆ ಅಂಗವಾಗಿ ಸತ್ಕಾರ ಸಮಾರಂಭ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 30 :

 
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕ ಘಟಕ ಗೋಕಾಕ ಹಾಗೂ ಗೋಕಾಕ ತಾಲ್ಲೂಕಾ ಪತ್ರಕರ್ತ ಸಂಘ (ರಿ). ಇವುಗಳ ಸಂಯುಕ್ತ ಆಶ್ರಯದಲ್ಲಿ ಎಪ್ರೀಲ್ 27 ನೌಕರರ ದಿನಾಚರಣೆ ಹಾಗೂ ಮೇ.1 ಕಾರ್ಮಿಕ ದಿನಾಚರಣೆ ಅಂಗವಾಗಿ ಸತ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಮೇ.1 ರವಿವಾರದಂದು ಬೆಳಿಗ್ಗೆ 9.30ಕ್ಕೆ ಜರುಗುವ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ವಿವಿಧ ಇಲಾಖೆಗಳಲ್ಲಿ ಸಾಧನೆಗೈದ ನೌಕರರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಮೇಶ ಜಾರಕಿಹೊಳಿ, ಉದ್ಘಾಟನೆಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ನೆರವೆರಿಸಲಿದ್ದಾರೆ ಎಂದು ನೌಕರರ ಸಂಘದ ಅಧ್ಯಕ್ಷ ಬಸವರಾಜ ಮುರಘೋಡ ಹಾಗೂ ತಾಲೂಕ ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಮೇಗೆರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: