RNI NO. KARKAN/2006/27779|Tuesday, December 3, 2024
You are here: Home » breaking news » ಗೋಕಾಕ:ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರಿಂದ ಪ್ರತಿಭಟನೆ

ಗೋಕಾಕ:ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರಿಂದ ಪ್ರತಿಭಟನೆ 

ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರಿಂದ ಪ್ರತಿಭಟನೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೆ 31

 

ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶಿಲ್ದಾರರ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.
ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಅವರು ನಮ್ಮ ರಾಜ್ಯದಲ್ಲಿ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ ಅವರ ಮೇಲೆ ಬಂದಿರುವ ಆರೋಪಕ್ಕೆ ಸ್ಪಷ್ಟೀಕರಣ ನೀಡಲು ಬೆಂಗಳೂರಿಗೆ ಆಗಮಿಸಿದ್ದರು. ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ಕಿಡಿಗೇಡಿಗಳು ಅವರ ಮೇಲೆ ಹಲ್ಲೆ ನಡೆಸಿ ಮಸಿ ಎರಚಿ ಅವಮಾನಿಸಿದ್ದು ಖಂಡನೀಯ ಅಂತವರನ್ನು ಸರಕಾರ ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಕೋಡಿಹಳ್ಳಿ ಅವರ ಮೇಲೆ ಬಂದಿರುವ ಆರೋಪದ ಸತ್ಯಾಸತ್ಯತೆ ಬಗ್ಗೆ ತನಿಖೆಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಿದ್ಲಿಂಗಪ್ಪ ಪೂಜೇರಿ, ಕುಮಾರ ತಿಗಡಿ, ಇರ್ಫಾನ ಜಮಾದಾರ, ಬಾಳೇಶ ತಡಸಿ, ರಮೇಶ ತಿಗಡಿ, ಬಾಹುಬಲಿ ಮೇಲ್ಮಟ್ಟಿ, ಮಾರುತಿ ಬೆಳಗಲಿ, ಮಲ್ಲೇಶ ನಾಯಕ, ಅರ್ಜುನ ಬೂಮನ್ನವರ, ಪರಶುರಾಮ ಮಳಲಿ, ಭೀಮಶಿ ಭಗಟಿ, ಮಾಳಪ್ಪ ಭಗಟಿ, ಬಸವರಾಜ ಕಡಕೋಳ, ಮುತ್ತಪ್ಪ ಅಗ್ನಪ್ಪನವರ ಸೇರಿದಂತೆ ಅನೇಕರು ಇದ್ದರು.


 

Related posts: