RNI NO. KARKAN/2006/27779|Wednesday, December 31, 2025
You are here: Home » breaking news » ಮೂಡಲಗಿ:7 ಭ್ರೂಣಗಳ ಹತ್ಯೆ ಪ್ರಕರಣ : ಸ್ಕ್ಯಾನಿಂಗ್ ಸೆಂಟರ್, ಹೆರಿಗೆ ಆಸ್ಪತ್ರೆ ಸೀಜ್

ಮೂಡಲಗಿ:7 ಭ್ರೂಣಗಳ ಹತ್ಯೆ ಪ್ರಕರಣ : ಸ್ಕ್ಯಾನಿಂಗ್ ಸೆಂಟರ್, ಹೆರಿಗೆ ಆಸ್ಪತ್ರೆ ಸೀಜ್ 

7 ಭ್ರೂಣಗಳ ಹತ್ಯೆ ಪ್ರಕರಣ : ಸ್ಕ್ಯಾನಿಂಗ್ ಸೆಂಟರ್, ಹೆರಿಗೆ ಆಸ್ಪತ್ರೆ ಸೀಜ್

 

ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜೂ 25:

 

ಮೂಡಲಗಿ ಪಟ್ಟಣದ ಹಳ್ಳದಲ್ಲಿ ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಡಿಎಚ್‍ಒ ಮಹೇಶ್ ಕೋಣಿ, ಮೂಡಲಗಿ ಪೊಲೀಸರ ನೇತೃತ್ವದಲ್ಲಿ ಸ್ಕ್ಯಾನಿಂಗ್ ಸೆಂಟರ್, ಆರು ಮೆಟರ್ನಿಟಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಮೂಡಲಗಿ ತಾಲೂಕಿನಲ್ಲಿ ಬೆಳಗಾವಿ ಡಿಎಚ್‍ಒ ನೇತೃತ್ವದ ತಂಡ ನವಜೀವನ ಆಸ್ಪತ್ರೆ ಹಾಗೂ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ಸೇರಿದಂತೆ ಒಟ್ಟು ಆರು ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ಹಾಗೂ ನವಜೀವನ ಆಸ್ಪತ್ರೆಗಳ ಕೈವಾಡ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎರಡು ಆಸ್ಪತ್ರೆಗಳನ್ನು ಡಿಎಚ್‍ಒ ಮಹೇಶ್ ಕೋಣಿ ಸೀಜ್ ಮಾಡಿದ್ದಾರೆ.

Related posts: