RNI NO. KARKAN/2006/27779|Friday, April 19, 2024
You are here: Home » breaking news » ಬೆಳಗಾವಿ:ಸತ್ಯ ಹೇಳುವಲ್ಲಿ ಪತ್ರಕರ್ತರು ಹಿಂಜರಿಯಬಾರದು : ಪತ್ರಿಕಾ ದಿನಾಚರಣೆಯಲ್ಲಿ ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಅಭಿಮತ

ಬೆಳಗಾವಿ:ಸತ್ಯ ಹೇಳುವಲ್ಲಿ ಪತ್ರಕರ್ತರು ಹಿಂಜರಿಯಬಾರದು : ಪತ್ರಿಕಾ ದಿನಾಚರಣೆಯಲ್ಲಿ ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಅಭಿಮತ 

ಸತ್ಯ ಹೇಳುವಲ್ಲಿ ಪತ್ರಕರ್ತರು ಹಿಂಜರಿಯಬಾರದು : ಪತ್ರಿಕಾ ದಿನಾಚರಣೆಯಲ್ಲಿ ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಅಭಿಮತ
ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ ಜು 5 :


ಸತ್ಯ ಹೇಳುವಲ್ಲಿ ಪತ್ರಕರ್ತರು ಹಿಂಜರಿಯಬಾರದು ಎಂದು ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಹೇಳಿದರು.
ಮಂಗಳವಾರದಂದು ನಗರದ ಜೀರಗೆ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.
ಪತ್ರಕರ್ತ ಬರವಣಿಗೆಯಲ್ಲಿ ಸ್ವಷ್ಟತೆ ಇರಬೇಕು. ಸತ್ಯ , ಅವಶ್ಯಕತೆ ಹಾಗೂ ನನ್ನ ಬರೆವಣಿಗೆ ಸರಿಯಾಗಿದೆಯೊ ಎಂಬುದನ್ನು ಅರಿತು ಪತ್ರಕರ್ತರು ಕಾರ್ಯೋನ್ಮುಖವಾಗಬೇಕು. ವರದಿಯಲ್ಲಿಯ ಸತ್ಯಾಸತ್ಯತೆಯನ್ನು ಮನಗಂಡು ಸಾಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರು ಸಹಕಾರಿಯಾಗಬೇಕು. ವ್ಯಕಿಗತವಾದ ದ್ವೇಷಗಳು ವರದಿಯಲ್ಲಿ ಬರದ ಹಾಗೆ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು. ಪತ್ರಕರ್ತರು ಕಾರ್ಯನಿರತವಾಗಿರುವಾಗ ಕೆಲಸಗಳನ್ನು ವಿಂಗಡನೆ ಮಾಡಿ ಅದರಂತೆ ಪ್ರಾಮುಖ್ಯತೆ ನೀಡಿ ಕಾರ್ಯಮಾಡುವ ಪ್ರವೃತ್ತಿಯನ್ನು ರೂಢಿಸಿಕೊಂಡರೆ ಎಲ್ಲ ಕಾರ್ಯಗಳನ್ನು ಸಲಿಸಾಗಿ ಮಾಡಲು ಸಾಧ್ಯ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾದರೆ ಸಮಾಜದಲ್ಲಿ ಒಳ್ಳೆಯ ಪತ್ರಕರ್ತರಾಗಲು ಸಾಧ್ಯ ಎಂದು ಹೇಳಿದರು.

ಪಾಲಕರು ತಮ್ಮ ಅಮೂಲ್ಯವಾದ ಮಕ್ಕಳನ್ನು ಶಿಕ್ಷಕರ ಕೈಯಲ್ಲಿ ಕೊಟ್ಟಿರುತ್ತಾರೆ ವಿದ್ಯಾರ್ಥಿಗಳ ಬುದ್ಧಿಮಟ್ಟವನ್ನು ಅರಿತು ಶಿಕ್ಷಕರು ಬೋಧನೆ ಮಾಡಬೇಕು. ಆ ದಿಸೆಯಲ್ಲಿ ಶಿಕ್ಷಕರು ಮಕ್ಕಳನ್ನು ದಡ್ಡರೆಂದು ಭಾವಿಸದೆ ಅವರ ಬುದ್ಧಿಯನ್ನು ಅರಿತು ಬೋಧನೆ ಮಾಡುವ ಕಲೆ ಕರಗತ ಗೊಳಿಸಿಕೊಳ್ಳಬೇಕು ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ ಹಾಗೂ ಶಿಕ್ಷಕರಿಗೆ ಸತ್ಕರಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ್, ಪೊಲೀಸ್ ಕಮಿಷನರ್ ಡಾ‌.ಬೋರಲಿಂಗ್ಯಯ, ಗುರುನಾಥ್ ಕಡಬೂರ, ಸರ್ವೋತ್ತಮ ಜಾರಕಿಹೊಳಿ , ಪುಂಡಲೀಕ ಬಾಳೋಜಿ, ಜಿಲ್ಲಾಧ್ಯಕ್ಷ ದಿಲೀಪ್ ಕುರಂದವಾಡೆ , ಶಿಕ್ಷಣಾಧಿಕಾರಿ ರವಿ ಭಜಂತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: