RNI NO. KARKAN/2006/27779|Friday, August 1, 2025
You are here: Home » breaking news » ಬೆಳಗಾವಿ:ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಬೆಳಗಾವಿಯ ಮುಕ್ತಾರಹುಸೇನ ಪಠಾಣಗೆ ಗೇಟ್ ಪಾಸ್

ಬೆಳಗಾವಿ:ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಬೆಳಗಾವಿಯ ಮುಕ್ತಾರಹುಸೇನ ಪಠಾಣಗೆ ಗೇಟ್ ಪಾಸ್ 

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಬೆಳಗಾವಿಯ ಮುಕ್ತಾರಹುಸೇನ ಪಠಾಣಗೆ ಗೇಟ್ ಪಾಸ್

 

ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜು 12 :

 

ರಾಜ್ಯ ಮಟ್ಟದ ನಿಗಮ ಮಂಡಳಿ , ಪ್ರಾಧಿಕಾರದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿ ಬರುವಂತೆ ರದ್ದು ಪಡಿಸಿ ಆದೇಶ ಹೋರಡಿಸಲಾಗಿದೆ‌.
ಮುಖ್ಯಮಂತ್ರಿಗಳ ನಿರ್ದೇಶನದ ಮೆರೆಗೆ ಮುಖ್ಯ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಎಂ.ಉಮೇಶ್ ಶಾಸ್ತ್ರಿ ಈ ಆದೇಶವನ್ನು ಹೊರಡಿಸಿದ್ದಾರೆ. ಇದರಿಂದ ರಾಜ್ಯದ 22 ಹೆಚ್ಚು ನಿಗಮ ಮಂಡಳಿ ಮತ್ತು ಪ್ರಾಧಿಕಾರದ ಅಧ್ಯಕ್ಷ ,ಉಪಾಧ್ಯಕ್ಷರು ಅಧಿಕಾರವನ್ನು ಕಳೆದುಕೊಂಡಿದ್ದಾರೆ.
ಇದರಲ್ಲಿ ಅವಿಭಜಿತ ಬೆಳಗಾವಿಯ ಮುಕ್ತಾರ ಪಠಾಣ ಅವರನ್ನು ತಮ್ಮ ಅಧಿಕಾರವನ್ನು ಕಳೆದುಕೊಂಡಿದ್ದಾರೆ‌.
ದಿವಂಗತ ಸುರೇಶ್ ಅಂಗಡಿ ಅವರಿಗೆ ಆಪ್ತರಾಗಿದ್ದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಮುಕ್ತಾರಹುಸೇನ್ ಪಠಾಣ ಅವರು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದರು. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಹೋರಡಿಸಲಾದ ಈ ಆದೇಶದಿಂದ ಮುಕ್ತಾರಹುಸೇನ ಪಠಾಣ ಅವರು ತಮ್ಮ ಅಧಿಕಾರವನ್ನು ಕಳೆದುಕೊಂಡಿದ್ದಾರೆ.

Related posts: