RNI NO. KARKAN/2006/27779|Wednesday, January 28, 2026
You are here: Home » breaking news » ಗೋಕಾಕ:ಖನಗಾಂವ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅವಮಾನ : ಅಭಿಮಾನಿಗಳಿಂದ ಗ್ರಾಮದಲ್ಲಿ ಪ್ರತಿಭಟನೆ

ಗೋಕಾಕ:ಖನಗಾಂವ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅವಮಾನ : ಅಭಿಮಾನಿಗಳಿಂದ ಗ್ರಾಮದಲ್ಲಿ ಪ್ರತಿಭಟನೆ 

ಖನಗಾಂವ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅವಮಾನ : ಅಭಿಮಾನಿಗಳಿಂದ ಗ್ರಾಮದಲ್ಲಿ ಪ್ರತಿಭಟನೆ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 :

ತಾಲೂಕಿನ ಖನಗಾಂವ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. 

ತಡರಾತ್ರಿ ಕೆಲ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹರಿದು ದರ್ಪ ಮೆರೆದಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನ ಖಂಡಿಸಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಟೈಯರಗೆ  ಬೆಂಕಿ ಹಚ್ಚಿ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ಹೆಸರಿಡಿ ಎಂದು ಫೋಟೋ ಹಾಕಲಾಗಿತ್ತು. ಆ ಫೋಟೋವನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎನ್ನಲಾಗಿದ್ದು, ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related posts: