RNI NO. KARKAN/2006/27779|Sunday, September 27, 2026
You are here: Home » breaking news » ಗೋಕಾಕ:ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೊಡಬೇಡಿ : ಡಿ.ವಾಯ್.ಎಸ್.ಪಿ ಮನೋಜಕುಮಾರ

ಗೋಕಾಕ:ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೊಡಬೇಡಿ : ಡಿ.ವಾಯ್.ಎಸ್.ಪಿ ಮನೋಜಕುಮಾರ 

ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೊಡಬೇಡಿ : ಡಿ.ವಾಯ್.ಎಸ್.ಪಿ ಮನೋಜಕುಮಾರ
ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಸೆ 14 :
ಸಾರ್ವಜನಿಕರು ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೊಡಬೇಡಿ, ಎಂದು ಗೋಕಾಕ ಡಿ. ವಾಯ್. ಎಸ್.ಪಿ ಮನೋಜಕುಮಾರ ನಾಯಿಕ ಹೇಳಿದರು.
ಅವರು ಬುಧವಾರ ಸಂಜೆ ಸ್ಥಳೀಯ ರೈಲು ನಿಲ್ದಾಣದಲ್ಲಿ ಸಾರ್ವಜನಿಕ ಜಾಗೃತಿ ಸಭೆಯಲ್ಲಿ ಮಾತನಾಡಿದರು, ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿರುವ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ಸುದ್ದಿಗಳ ಬಗ್ಗೆ ಸಾರ್ವಜನಿಕರು ಗಮನ ಹರಿಸಬಾರದು. ಬೇರೆ ಎಲ್ಲಿಯೂ ನಡೆದಂತಹ ಪ್ರಕರಣಗಳ ಸುಳ್ಳು ವಿಡಿಯೋಗಳನ್ನು ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮಕ್ಕಳ ಕಳ್ಳತನ ಪ್ರಕರಣಗಳು ಎಂದು ಬಿಂಬಿಸಲಾಗುತ್ತಿದೆ. ಜಿಲ್ಲೆಯಲ್ಲಿ ಅಂತಹ ಯಾವುದೇ ಪ್ರಕರಣಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿ, ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ 112 ಗೆ ಕರೆ ಮಾಡಿ ಎಂದು ಹೇಳಿದರು.
ಘಟಪ್ರಭಾ ಪೋಲಿಸ್ ಠಾಣೆಯ ಸಿಪಿಐ ಶ್ರೀಶೈಲ ಬ್ಯಾಕೂಡ, ಸಿಬ್ಬಂದಿಗಳಾದ ವಿಠ್ಠಲ ಕೋಳಿ, ಹಿರಿಯರಾದ ಸುರೇಶ ಪಾಟೀಲ, ಸಲೀಮ ಕಬ್ಬೂರ, ಶ್ರೀಕಾಂತ್ ಕುಲಕರ್ಣಿ ಸೇರಿದಂತೆ ಅನೇಕರು ಇದ್ದರು.

Related posts: