RNI NO. KARKAN/2006/27779|Saturday, February 14, 2026
You are here: Home » breaking news » ಬೆಳಗಾವಿ:ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ್ ಕಾರ್ಯಾಚರಣೆ : ಪಿಎಫ್‌ಐ, ನ ಏಳು ಮುಖಂಡರ ಬಂಧನ

ಬೆಳಗಾವಿ:ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ್ ಕಾರ್ಯಾಚರಣೆ : ಪಿಎಫ್‌ಐ, ನ ಏಳು ಮುಖಂಡರ ಬಂಧನ 

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ್ ಕಾರ್ಯಾಚರಣೆ : ಪಿಎಫ್‌ಐ, ನ ಏಳು ಮುಖಂಡರ ಬಂಧನ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 27 :

 

ಸಮಾಜದ ಸ್ವಾಸ್ಥ್ಯ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಮಂಗಳವಾರ ಬೆಳಿಗ್ಗೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸೇರಿ ಏಳು ಮುಖಂಡರನ್ನು ಬಂಧಿಸಲಾಗಿದೆ’ ಎಂದು ಮಾರ್ಕೆಟ್‌ ಠಾಣೆ ಪೊಲೀಸರು ತಿಳಿಸಿದ್ದಾರೆ.

ಆಜಂ ನಗರದ ನಿವಾಸಿ ಪಿಎಫ್‌ಐ ಸಂಘಟನೆಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಝಕೀವುಲ್ಲಾ ಫೈಜಿ, ಅಸಾದ್‌ಖಾನ್ ಬಡಾವಣೆ ನಿವಾಸಿ ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಬೀದ್ ಖಾನ್ ಕಡೋಲಿ, ಬದ್ರುದ್ದೀನ್ ಪಟೇಲ್, ಶಿವಾಜಿ ನಗರ ನಿವಾಸಿ ಸಲಾವುದ್ದೀನ್ ಖಿಲೆವಾಲೆ, ಅಮನ್ ನಗರ ನಿವಾಸಿ ಸಮೀವುಲ್ಲಾ  ಪೀರಜಾದೆ,  ಬಾಕ್ಸೈಟ್ ರೋಡ್ ಪ್ರದೇಶದ ನಿವಾಸಿ ಜಹೀರ್ ಘೀವಾಲೆ, ವಿದ್ಯಾಗಿರಿ ನಿವಾಸಿ ರೆಹಾನ್ ಅಜೀಜ್(25) ಬಂಧಿತರು.

ಎಲ್ಲರನ್ನೂ ಸಿಆರ್‌ಪಿಸಿ 110 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಮಂಗಳವಾ ನಸುಕಿನ ಜಾವ 4 ಗಂಟೆಗೆ ಡಿಸಿಸಿ ರವೀಂದ್ರ ಗಡಾದಿ ನೇತೃತ್ವದಲ್ಲಿ ದಾಳಿ ಮಾಡಿ, ವಶಕ್ಕೆ ಪಡೆಯಲಾಗಿತ್ತು. ಬಂಧಿತರನ್ನು ಮಂಗಳವಾರ ಬೆಳಿಗ್ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಲಾಗಿದೆ. ವೈದ್ಯಕೀಯ ತಪಾಸಣೆ ಬಳಿಕ ಹಿಂಡಲಗಾ ‌ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts: