RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ

ಗೋಕಾಕ:ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ 

ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ

ಗೋಕಾಕ ಡಿ 3 : ಜಾನುವಾರುಗಳು ರೈತರ ಜೀವನಾಡಿಯಾಗಿ ಕೃಷಿ ಚಟುವಟಿಕೆಗಳೊಂದಿಗೆ ಅವರ ಆರ್ಥಿಕ ಪ್ರಗತಿಯಲ್ಲಿಯೂ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಶನಿವಾರದಂದು ನಗರದಲ್ಲಿ  ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆಯ 54 ಲಕ್ಷ ರೂಗಳಲ್ಲಿ ನಿರ್ಮಿಸಲಾದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು

ರೈತರ ಬೆನ್ನೆಲುಬಾಗಿರುವ ಜಾನುವಾರುಗಳ ರಕ್ಷಣೆಗೆ ಸರಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.ಸುಸಜ್ಜಿತ ಪಶು ಆಸ್ಪತ್ರೆಗಳು ಸಂಚಾರಿ ಚಿಕಿತ್ಸಾ ಅಂಬುಲೆನ್ಸಗಳು ಕಾರ್ಯ ನಿರ್ವಹಿಸುತ್ತಿವೆ. ರೈತರು ಇದರ ಸದುಪಯೋಗ ಪಡೆಸಿಕೊಂಡು ತಮ್ಮ ಜಾನುವಾರುಗಳ ಆರೋಗ್ಯ ರಕ್ಷಣೆ ಮಾಡಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಮೋಹನ ಕಮತ , ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಚಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಭೀಮಶಿ ಭರಮನ್ನವರ, ಡಾ.ಶಶಿಕಾಂತ  ಕೌಜಲಗಿ  ನಗರಸಭೆ ಸದಸ್ಯರು ಉಪಸ್ಥಿತರಿದ್ದರು.

Related posts: