RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಇದೇ ವರ್ಷದಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭ : ಶಾಸಕ ರಮೇಶ

ಗೋಕಾಕ:ಇದೇ ವರ್ಷದಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭ : ಶಾಸಕ ರಮೇಶ 

ಇದೇ ವರ್ಷದಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭ : ಶಾಸಕ ರಮೇಶ

ಗೋಕಾಕ ಡಿ 3 :  ನಗರದ ಸರಕಾರಿ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವದರೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಇದೇ ವರ್ಷದಿಂದ ಪ್ರಾರಂಭಿಸಲಾಗುತ್ತದೆ  ಎಂದು ಶಾಸಕ ರಮೇಶ ಜಾರಕಿಹೊಳಿ  ಹೇಳಿದರು.
ಶನಿವಾರದಂದು ನಗರದಲ್ಲಿ ತಾಲೂಕು ಸಾರ್ವಜನಿಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಡಿ‌.ಎನ್. ಬಿ – ಓ.ಬಿ.ಜಿ ಕೋರ್ಸನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ ಸದ್ಯದಲ್ಲಿಯೇ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್ ನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಕ್ಷೇತ್ರದ ಜನರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ‌ ಎಲ್ಲಾ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉನ್ನತ ವೈದ್ಯಕೀಯ ಎಂಬಿಬಿಎಸ್ ಕಾಲೇಜನ್ನು ಪ್ರಾರಂಭಿಸಲು ಪೂರಕವಾದ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಈ ಯೋಜನೆಗಳ ಸದುಪಯೋಗ ಪಡೆಸಿಕೊಳ್ಳುವದರೊಂದಿಗೆ ಇನ್ನು ಹೆಚ್ಚಿನ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದರು.

ಈ ಸಂದರ್ಭದಲ್ಲಿ ಡಾ‌.ರವೀಂದ್ರ ಅಂಟಿನ , ಡಾ. ಎಂ.ಎಸ್.ಕೊಪ್ಪದ, ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ , ಉಪಾಧ್ಯಕ್ಷ ಬಸವರಾಜ ಆರೆನ್ನವರ ಉಪಸ್ಥಿತರಿದ್ದರು.

Related posts: