RNI NO. KARKAN/2006/27779|Thursday, October 16, 2025
You are here: Home » breaking news » ಮೂಡಲಗಿ :ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಮೂಡಲಗಿ ಹೊಸ ತಾಲೂಕು ರಚನೆಗೆ ಅನುಮೋದನೆ , ಸಿ.ಎಂ ಭರವಸೆ : ಶಾಸಕ ಬಾಲಚಂದ್ರ

ಮೂಡಲಗಿ :ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಮೂಡಲಗಿ ಹೊಸ ತಾಲೂಕು ರಚನೆಗೆ ಅನುಮೋದನೆ , ಸಿ.ಎಂ ಭರವಸೆ : ಶಾಸಕ ಬಾಲಚಂದ್ರ 

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮಂಗಳವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಭೇಟಿ ಮಾಡಿ ಮೂಡಲಗಿ ತಾಲೂಕು ರಚನೆಗೆ ಮನವಿ ಮಾಡಿಕೊಂಡರು

ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಮೂಡಲಗಿ ಹೊಸ ತಾಲೂಕು ರಚನೆಗೆ ಅನುಮೋದನೆ , ಸಿ.ಎಂ ಭರವಸೆ : ಶಾಸಕ ಬಾಲಚಂದ್ರ
ಮೂಡಲಗಿ ಅ 10: ನಾಳೆ ದಿ. 11 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮೂಡಲಗಿ ಹೊಸ ತಾಲೂಕು ರಚನೆಗೆ ಅನುಮೋದನೆ ನೀಡುತ್ತೇನೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸ್ಪಷ್ಟವಾಗಿ ಭರವಸೆ ನೀಡಿದ್ದಾರೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿ(ಕೃಷ್ಣಾ)ಗೆ ತೆರಳಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ನಾಳಿನ ಸಂಪುಟ ಸಭೆಯಲ್ಲಿ ಮೂಡಲಗಿ ಹೊಸ ತಾಲೂಕಾಗುವುದು ನಿಶ್ಚಿತವೆಂದು ತಿಳಿಸಿದ್ದಾರೆ.

ಕಳೆದ 4 ದಶಕಗಳಿಂದ ತಾಲೂಕು ರಚನೆಗಾಗಿ ಹೋರಾಟ ಮಾಡುತ್ತಿರುವ ಮೂಡಲಗಿ ಭಾಗದ ನಾಗರೀಕರಿಗೆ ನಾಳಿನ ದಿನ ಶುಭಘಳಿಗೆಯಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಂಪುಟ ಸಭೆಯಲ್ಲಿ ಮೂಡಲಗಿ ಹೊಸ ತಾಲೂಕಿಗೆ ಅನುಮೋದನೆ ನೀಡಿ ಅಧಿಕೃತವಾಗಿ ತಾಲೂಕು ಸ್ಥಳವನ್ನಾಗಿ ಘೋಷಣೆ ಮಾಡಲಿದ್ದಾರೆ. ದೇವರ ದಯೆಯಿಂದ ಮೂಡಲಗಿ ನೂತನ ತಾಲೂಕು ಕೇಂದ್ರವಾಗಿ ಅಸ್ಥಿತ್ವಕ್ಕೆ ಬರಲಿದೆ. ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ನೇತೃತ್ವದಲ್ಲಿ 3 ಬಾರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೂಡಲಗಿ ತಾಲೂಕು ರಚನೆಗಾಗಿ ಮನವಿ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ್ ಪಾಟೀಲ ಅವರು ಇದ್ದರು.

Related posts: