RNI NO. KARKAN/2006/27779|Tuesday, January 27, 2026
You are here: Home » breaking news » ಗೋಕಾಕ:ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸಲು ಸರ್ಕಾರ ಆದ್ಯತೆ ನೀಡಿದೆ : ನಮ್ಮ ಕ್ಲಿನಿಕ್ ಉದ್ಘಾಟಿಸಿದ ಶಾಸಕ ರಮೇಶ

ಗೋಕಾಕ:ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸಲು ಸರ್ಕಾರ ಆದ್ಯತೆ ನೀಡಿದೆ : ನಮ್ಮ ಕ್ಲಿನಿಕ್ ಉದ್ಘಾಟಿಸಿದ ಶಾಸಕ ರಮೇಶ 

ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸಲು ಸರ್ಕಾರ ಆದ್ಯತೆ ನೀಡಿದೆ : ನಮ್ಮ ಕ್ಲಿನಿಕ್ ಉದ್ಘಾಟಿಸಿದ ಶಾಸಕ ರಮೇಶ

ಗೋಕಾಕ ಡಿ 18 : ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸಲು ಸರ್ಕಾರ ಆದ್ಯತೆ ನೀಡಿದ್ದು, ಯಾವುದೇ ತಾರತಮ್ಯ ಇಲ್ಲದೇ ಎಲ್ಲರಿಗೂ ಉತ್ತಮ ಚಿಕಿತ್ಸೆ, ಉಚಿತ ಔಷಧೋಪಚಾರ ದೊರೆಯುವಂತೆ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ರವಿವಾರದಂದು ನಗರದ ಸತೀಶ ನಗರದಲ್ಲಿ ಸರಕಾರದ ಹೊಸ ಯೋಜನೆ ನಮ್ಮ ಕ್ಲಿನಿಕ್ ಆಸ್ಪತ್ರೆಯನ್ನು ಸಸಿಗೆ ನೀರೆಯುವ ಮೂಲಕ ಲೋಕಾರ್ಪಣೆ ಮಾಡಿ  ಮಾತನಾಡಿದ ಅವರು ಸಾರ್ವಜನಿಕರ  ಆರೋಗ್ಯಕ್ಕೆ ಹೆಚ್ಚಿನ ಮಹತ್ವ ಕೊಟ್ಟು  ಪ್ರಾಥಮಿಕ ಹಂತದಲ್ಲೇ ಉತ್ತಮ ಚಿಕಿತ್ಸೆ ಸಿಗುವ ಉದ್ದೇಶದಿಂದ ನಮ್ಮ ಕ್ಲಿನಿಕ್ ಆಸ್ಪತ್ರೆಯನ್ನು ಪ್ರಾರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಮೂರು ಆಸ್ಪತ್ರೆಗಳನ್ನು ಪ್ರಾರಂಭಿಸಲಾಗುವದು  ಸಾರ್ವಜನಿಕರು ಇದರ ಸದುಪಯೋಗ ಪಡೆಸಿಕೊಂಡು ಆರೋಗ್ಯವಂತ ಬಾಳು ಬದುಕಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ  ತಾಲೂಕು ಆರೋಗ್ಯಾಧಿಕಾರಿ ಎಂ.ಎಸ್.ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ಆರ್.ಎಸ್.ಅಂಟಿನ, ಪೌರಾಯುಕ್ತ ಶಿವಾನಂದ ಹಿರೇಮಠ,  ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸ್ಥಾಯಿ ಸಮಿತಿ ಚೆರಮನ್ ಸಿದಪ್ಪ ಹುಚ್ಚರಾಮಗೋಳ, ಕುತಬುದ್ದೀನ ಗೋಕಾಕ ,  ಶ್ರೀಶೈಲ ಯಕುಂಡಿ, ಪ್ರಕಾಶ ಮುರಾರಿ, ಮುಖಂಡರಾದ ದುರ್ಗಪ್ಪ ಶಾಸ್ತ್ರೀಗೋಲ್ಲರ, ಡಾ.ಅಬ್ದುಲವಹಾಬ ಜಮಾದಾರ, ಬಸವರಾಜ ದೇಶನೂರ ಉಪಸ್ಥಿತರಿದ್ದರು.

Related posts: