RNI NO. KARKAN/2006/27779|Sunday, July 13, 2025
You are here: Home » breaking news » ಗೋಕಾಕ:ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ:ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ 

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ


ಗೋಕಾಕ ಡಿ 30 : ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.

Related posts: