RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ:ಮಾ. 17ರಂದು ಗೋಕಾಕನಲ್ಲಿ ಪ್ರಜಾಧ್ವನಿ ಸಮಾವೇಶ : ಶಾಸಕ ಸತೀಶ ಜಾರಕಿಹೊಳಿ

ಗೋಕಾಕ:ಮಾ. 17ರಂದು ಗೋಕಾಕನಲ್ಲಿ ಪ್ರಜಾಧ್ವನಿ ಸಮಾವೇಶ : ಶಾಸಕ ಸತೀಶ ಜಾರಕಿಹೊಳಿ 

ಮಾ. 17ರಂದು  ಗೋಕಾಕನಲ್ಲಿ ಪ್ರಜಾಧ್ವನಿ ಸಮಾವೇಶ : ಶಾಸಕ ಸತೀಶ ಜಾರಕಿಹೊಳಿ

ಗೋಕಾಕ ಮಾ 11 : “ಮಾ. 17ರಂದು  ಗೋಕಾಕನಲ್ಲಿ ಪ್ರಜಾಧ್ವನಿ ಸಮಾವೇಶ ಆಯೋಜಿಸಲಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸೇರಿ ಕಾಂಗ್ರೆಸ್ ನ ಹಲವಾರು ನಾಯಕರು ಭಾಗವಹಿಸಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು
ನಗರದ ಹಿಲ್‌ ಗಾರ್ಡನ್‌  ಕಚೇರಿಯಲ್ಲಿ ನಡೆದ   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ ಯಶಸ್ಸಿಯಾಗಿ ನಡೆಸಲಾಗಿದ್ದು, 2ನೇ ಹಂತದ ಯಾತ್ರೆಯನ್ನು ವಿಧಾನಸಭಾ ಕ್ಷೇತ್ರವಾರು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಿಸಿದ ಯೋಜನೆಗಳನ್ನು ಮನೆ ಮನೆಗೆ ತಿಳಿಸಲಾಗುವುದು, ಇನ್ನು ಅನೇಕ ಯೋಜನೆಗಳನ್ನು ಘೋಷಿಸಲಾಗುವುದು, ಇದರಲ್ಲಿ ಜಿಲ್ಲಾವಾರು ಯೋಜನೆಗಳು ಹಂಚಿಕೆಯಾಗಿವೆ.  ಜನ ಆಶೀರ್ವಾದ ಮಾಡಿದರೆ ಈ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು
ಪಕ್ಷಾಂತರ ಪರ್ವ ಸಹಜ:  ಚುನಾವಣೆ ಬಂದಾಗ ಪಕ್ಷಾಂತರ ಪರ್ವ ಸಹಜವಾಗಿದೆ. ಬಿಜೆಪಿ ಆಡಳಿತ ಅವಧಿಯಲ್ಲಿ ಬೆಲೆ ಏರಿಕೆಯಿಂದ ಜನರು ತತ್ತರಿಸಿಹೋಗಿದ್ದಾರೆ. ಹೀಗಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ನತ್ತ ಒಲವು ತೋರುತ್ತಿದ್ದಾರೆ. ಮತದಾರರು ಸಹ ಕಾಂಗ್ರೆಸ್‌ ಅಧಿಕಾರ ಬಯಸಿದ್ದಾರೆ. ಪ್ರಧಾನಿ  ಮೋದಿ ಹಾಗೂ ಸಿಎಂ ಬೊಮ್ಮಾಯಿ ಆಡಳಿತದಿಂದ ರಾಜ್ಯದ ಜನತೆ ರೋಸಿಹೋಗಿದ್ದಾರೆ ಎಂದರು.
ಎಲ್ಲಾ ಕಡೆಯಲ್ಲಿ ಗೊಂದಲಗಳಿಗೆ, ಆದರೆ, ಟಿಕೆಟ್‌ ಪೈನಲ್‌ ಆಗುವುದು ಒಬ್ಬರಿಗೆ ಮಾತ್ರ.  ನಾಯಕರ ಭವಿಷ್ಯ ಮತದಾರರ  ಕೈಯಲ್ಲಿದೆ ಪ್ರಜಾಧ್ವನಿಯಾತ್ರೆಯಲ್ಲಿ ಬಿಜೆಪಿ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರ  ನಡೆಸಿರುವ ಬಗ್ಗೆ ಜನತೆ ಮುಂದೆ ಇಡಲು ಸಮಾವೇಶ ನಡೆಸಲಾಗುತ್ತಿದೆ  ಎಂದರು.
ಕಾಂಗ್ರೆಸ್‌ ಮುಖಂಡ ಅಶೋಕ ಪೂಜಾರಿ ಮಾತನಾಡಿ,  ರಾಜ್ಯದಲ್ಲಿ ಬಿಜೆಪಿ ನೆಲೆಯೂರಿದೆ ಎಂದು  ಬಿಜೆಪಿಗರು ಭ್ರಮೆಯಲ್ಲಿದ್ದಾರೆ.  ಗೋಕಾಕ ಕ್ಷೇತ್ರದ ಬದಲಾವಣೆ ಜನರು ಬಯಸಿದ್ದಾರೆ.   ಶಾಸಕ  ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಜೆಪಿ ಯಿಂದ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರನ್ನು ಬರಮಾಡಿಕೊಳ್ಳಲಾಗಿದೆ ಎಂದರು .
ಈ ಸಂದರ್ಭದಲ್ಲಿ ವಿವೇಕ ಜತ್ತಿ,ಸಿದ್ದಲಿಂಗ ದಳವಾಯಿ, ಚಂದ್ರಶೇಖರ್ ಕೊಣ್ಣೂರ, ಲಖನ್ನ ಕಳಸಣ್ಣವರ ಉಪಸ್ಥಿತರಿದ್ದರು

Related posts: