RNI NO. KARKAN/2006/27779|Saturday, October 5, 2024
You are here: Home » breaking news » ಗೋಕಾಕ:ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಡಾಡಿ ನಾಮಪತ್ರ ಸಲ್ಲಿಕೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಾಥ್

ಗೋಕಾಕ:ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಡಾಡಿ ನಾಮಪತ್ರ ಸಲ್ಲಿಕೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಾಥ್ 

ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಡಾಡಿ ನಾಮಪತ್ರ ಸಲ್ಲಿಕೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಾಥ್

ಗೋಕಾಕ ಏ 18 : ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಾ‌.ಮಹಾಂತೇಶ ಕಡಾಡಿ ಅವರು ಮಂಗಳವಾರದಂದು ನಗರದ ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿದ ಡಾ‌.ಕಡಾಡಿ ಅವರು ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು .
ಡಾ.ಮಹಾಂತೇಶ ಕಡಾಡಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗಾಳಿ ಇದೆ. ಕಾಂಗ್ರೆಸ್ ಪಕ್ಷ ಅಧಿಕಾರಿಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಶೋಕ್ ಪೂಜಾರಿ ಅವರ ಮನವಲಿಸಿ ಅವರನ್ನು ಸಹ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸುವಂತೆ ಮನವಿ ಮಾಡಲಾಗುವುದು ಅವರು ಸಹ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವ ವಿಶ್ವಾಸವಿದೆ ಎಂದು ಹೇಳಿದರು.


 

Related posts: