ಗೋಕಾಕ:ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಈ ಬಾರಿ ಗೋಕಾಕ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿಲ್ಲ : ಅಶೋಕ ಸ್ವಷ್ಟನೆ

ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಈ ಬಾರಿ ಗೋಕಾಕ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿಲ್ಲ : ಅಶೋಕ ಸ್ವಷ್ಟನೆ
ಗೋಕಾಕ ಏ 20 : ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಈ ಬಾರಿ ಗೋಕಾಕ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಕಾಂಇ ನಾಯಕರ ಮನವಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಾ ಮಹಾಂತೇಶ ಕಡಾಡಿ ನಮ್ಮ ಪಕ್ಷದ ಅಭ್ಯರ್ಥಿ. ಪಕ್ಷದ ಮುಖಂಡನಾಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದು ನನ್ನ ಕರ್ತವ್ಯವಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಮುಂದಿನ ದಿನಗಳಲ್ಲಿ ಪಕ್ಷದ ಇತರ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ. ರಾಜಕೀಯದಲ್ಲಿ ಬದಲಾವಣೆಗಳು ಸಾಮಾನ್ಯ ಎಂದು ಅಶೋಕ್ ಪ್ರಕಟಿಸಿದ್ದಾರೆ.
ವರಿಷ್ಠರು ಪಕ್ಷದ ಪರವಾಗಿ ಡಾ.ಕಡಾಡಿ ಅವರಿಗೆ ಬಿಫಾರ್ಮ್ ನೀಡಲಾಗಿದೆ. ಮೇಲಿನಿಂದ ಬಂದ ಆದೇಶದಂತೆ ಎಲ್ಲ ಕಾರ್ಯಕರ್ತರು, ಸೇರಿದಂತೆ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ. ಇನ್ನೆರಡು ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಗೆಲ್ಲಿಸುವಲ್ಲಿ ಶ್ರಮಿಸೋಣ ಎಂದು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಲಕ್ಷ್ಮಣ ಸವದಿ, ಅಶೋಕ್ ಪಟ್ಟಣ , ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ, ಸ್ಥಳೀಯ ಮುಖಂಡ ಸಿದ್ದಲಿಂಗ ದಳವಾಯಿ ಉಪಸ್ಥಿತರಿದ್ದರು.
ಒಟ್ಟಾರೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಗೆ ದಿನವಾಗಿದ್ದರಿಂದ ಬೆಳಗ್ಗೆಯಿಂದ ಪೂಜಾರಿ ಅವರ ಬೆಂಬಲಿಗರು ಮತ್ತು ಕಾಂಗ್ರೆಸ ಮುಖಂಡರು ಪೂಜಾರಿ ಅವರ ಮನೆಯ ಮುಂದೆ ಸೇರಿದ್ದರು. ಕಾಂಗ್ರೆಸ್ ಪಕ್ಷದ ಮುಖಂಡರು ಬೆಳಿಗ್ಗೆಯಿಂದ ಪೂಜಾರಿ ಅವರ ಮನವಲಿಸಲು ಹರಸಾಹಸ ಪಟ್ಟರು. ಕೊನೆಗೆ ನಾಯಕ ಸಂಧಾನ ಫಲಪ್ರದವಾಗಿ ಅಶೋಕ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ನಿರ್ಧಾರದಿಂದ ಹಿಂದೆ ಸರಿದು ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿದರು.
ಪೋನ ಮೂಲಕ ಸಿ.ಎಲ್.ಪಿ ನಾಯಕ ಮತ್ತು ಡಿಕೆಶಿ ಭರವಸೆ : ಪಕ್ಷದ ಘೋಷಿಸಿದ ಅಭ್ಯರ್ಥಿಗೆ ಬೆಂಬಲ ಸೂಚಿಸಿ, ಪಕ್ಷ ಅಧಿಕಾರಕ್ಕೆ ಬಂದರೆ ತಮ್ಮನ್ನು ವಿಧಾನ ಪರಿಷತಗೆ ಆಯ್ಕೆಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.