ಹುಕ್ಕೇರಿ:ರಾಹುಕಾಲದಲ್ಲೇ ತಮ್ಮ ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ

ರಾಹುಕಾಲದಲ್ಲೇ ತಮ್ಮ ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ
ಹುಕ್ಕೇರಿ ಏ 20 : ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿಯವರು ಯಮಕನಮರಡಿ ವಿಧಾನಸಭಾ ಎಸ್ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸಿದರು.
ಸಮಾಜದಲ್ಲಿ ಮೌಡ್ಯದ ವಿರುದ್ಧ ಸದಾ ಜಾಗೃತಿ ಮೂಡಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವ ಮೂಲಕ ಮತ್ತೊಮ್ಮೆ ತಮ್ಮ ವೈಚಾರಿಕ ಚಿಂತನೆ ಸಾಬೀತು ಪಡಿಸಿದರು.ನಾಮಪತ್ರವನ್ನು ಮೆರವಣಿಗೆ ನಡೆಸದೆ ಕೇವಲ ಐದು ಜನರೊಂದಿಗೆ ಹುಕ್ಕೇರಿ ತಹಶೀಲ್ದಾರ್ ಕಚೇರಿಗೆ ಬಂದು ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಈ ಬಾರಿಯೂ ಯಾವುದೇ ಆಡಂಬರ ಇಲ್ಲದೆ ಐದು ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿಯವರು ಯಮಕನಮರಡಿ ವಿಧಾನಸಭಾ ಎಸ್ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸಿದರು. ಸಮಾಜದಲ್ಲಿ ಮೌಡ್ಯದ ವಿರುದ್ಧ ಸದಾ ಜಾಗೃತಿ ಮೂಡಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವ ಮೂಲಕ ಮತ್ತೊಮ್ಮೆ ತಮ್ಮ ವೈಚಾರಿಕ ಚಿಂತನೆ ಸಾಬೀತು ಪಡಿಸಿದರು.ನಾಮಪತ್ರವನ್ನು ಮೆರವಣಿಗೆ ನಡೆಸದೆ ಕೇವಲ ಐದು ಜನರೊಂದಿಗೆ ಹುಕ್ಕೇರಿ ತಹಶೀಲ್ದಾರ್ ಕಚೇರಿಗೆ ಬಂದು ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಈ ಬಾರಿಯೂ ಯಾವುದೇ ಆಡಂಬರ ಇಲ್ಲದೆ ಐದು ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ 15 ವರ್ಷಗಳಿಂದ ಜನರ ಸೇವೆ ಮಾಡುತ್ತಾ ಬಂದಿದ್ದು,ಈ ಬಾರಿಯು ಜನರು ನನಗೆ ನಾಲ್ಕನೆ ಬಾರಿ ಅವಕಾಶ ನೀಡಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ಸಹಕಾರ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.