ಯಮಕನಮರಡಿ:ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ
ಯಮಕನಮರಡಿ ಮೇ 10 : ಈ ಬಾರಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದು,ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರದಂದು ಯಮಕನಮರಡಿ ಮತಕ್ಷೇತ್ರದ ರಾಜಕಟ್ಟಿ ಗ್ರಾಮದ ನಮ್ಮೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 235 ರಲ್ಲಿ ಮತದಾನ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಜೊತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳನ್ನು ಮೆಚ್ಚಿ ರಾಜ್ಯದ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಬಹುಮತದಿಂದ ಗೆಲ್ಲಿಸಿಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.