RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ:ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ 

ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮೇ 19 : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.
ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು.
ಅರಭಾವಿಯಿಂದ ಸತತ 6ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಪುರುಷೋತ್ತಮಾನಂದ ಮಹಾಸ್ವಾಮಿಗಳು, ಶಾಸಕರ ಜನಪರ ಕಾರ್ಯಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.
ಕಳೆದ 2004 ರಿಂದ ಅರಭಾವಿ ಕ್ಷೇತ್ರದಲ್ಲಿ ಎಲ್ಲ ಸಮಾಜಗಳನ್ನು ಒಗ್ಗೂಡಿಸಿ ಅಂತಹ ಸಮಾಜಗಳ ಪ್ರಗತಿಗಾಗಿ ಶ್ರಮಿಸಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿ. ಯಾರೇ ತಮ್ಮ ಕಷ್ಠಗಳನ್ನು ಹೇಳಿಕೊಂಡು ಬರುವವರಿಗೆ ಬಾಲಚಂದ್ರ ಜಾರಕಿಹೊಳಿ ಅವರು ಸಹಾಯ ಹಸ್ತ ನೀಡುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಎಲ್ಲ ಸಮುದಾಯಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ ಸಮಾನತೆಯನ್ನು ಎತ್ತಿ ಹಿಡಿಯುವ ಮೂಲಕ 12ನೇ ಶತಮಾನದ ಅನುಭವ ಮಂಟಪದ ಮಾದರಿಯಲ್ಲಿ ನೂತನ ಶಾಸಕರು ಕರ್ತವ್ಯ ನಿರ್ವಹಿಸಲಿ. ಅವರಿಂದ ಜನರ ಕಷ್ಠಕಾರ್ಪಣ್ಯಗಳು ದೂರವಾಗಲಿ. ಕ್ಷೇತ್ರ ಸಮೃದ್ಧಿಯಾಗಲಿ. ಬಾಲಚಂದ್ರ ಜಾರಕಿಹೊಳಿ ಅವರು ಕಂಡ ಕನಸುಗಳು ಸಾಕಾರಗೊಳ್ಳಲಿ ಎಂದು ಶ್ರೀಗಳು ಇದೇ ಸಂದರ್ಭದಲ್ಲಿ ಶಾಸಕರನ್ನು ಸತ್ಕರಿಸಿ ಶುಭಾಶೀರ್ವಾದ ಮಾಡಿದರು.
ಈ ಸಂದರ್ಭದಲ್ಲಿ ಕಲ್ಲೋಳಿ ತಾಪಂ ಮಾಜಿ ಸದಸ್ಯ ಅಶೋಕ ಮಕ್ಕಳಗೇರಿ, ಪ್ರಭಾಶುಗರ ಮಾಜಿ ನಿರ್ದೇಶಕ ಮಹಾಂತೇಶ ಕಪ್ಪಲಗುದ್ದಿ, ತುಕ್ಕಾನಟ್ಟಿ ಅಮೋಘಸಿದ್ಧೇಶ್ವರ ದೇವಸ್ಥಾನದ ಅರ್ಚಕ ಕಲ್ಲಪ್ಪ ಬಿ. ಉಪ್ಪಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts: