RNI NO. KARKAN/2006/27779|Monday, February 16, 2026
You are here: Home » breaking news » ಗೋಕಾಕ:ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ

ಗೋಕಾಕ:ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ 

ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಬುಧವಾರದಂದು ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ ಅವರು ಶ್ರೀಗಳನ್ನು ಸತ್ಕರಿಸಿದರು.
   ಸತ್ಕಾರ ಸ್ವೀಕರಿಸಿ ಮಾತನಾಡಿದ ಶ್ರೀಗಳು ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು  ಶ್ಲಾಘನೀಯ ಅವರಿಂದ ಇನ್ನು ಹೆಚ್ಚಿನ ಜನಸೇವೆಯಾಗಲೆಂದು ಹಾರೈಸಿದರು.
   ಇದೇ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವನಾಯಕ ಅಮರನಾಥ ಜಾರಕಿಹೊಳಿ ಅವರನ್ನು ಶ್ರೀಗಳು ಸತ್ಕರಿಸಿದರು.
   ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಉಪ್ಪಾರ ಸಮಾಜದ ಮುಖಂಡರುಗಳಾದ ಅಡಿವೆಪ್ಪ ಕಿತ್ತೂರ, ಕುಶಾಲ ಗುಡೇನ್ನವರ, ಅಶೋಕ ಗೋಣಿ, ಚೊಟಪ್ಪಗೋಳ ಸೇರಿದಂತೆ ಅನೇಕರು ಇದ್ದರು.

Related posts: