ಗೋಕಾಕ:ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು : ಸನತ ಜಾರಕಿಹೊಳಿ

ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು : ಸನತ ಜಾರಕಿಹೊಳಿ
ಗೋಕಾಕ ಜು 8 : ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು’ ಎಂದು ಲಕ್ಷ್ಮಿ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು.
ಶನಿವಾರದಂದು ನಗರದ ಮಯೂರ ಸ್ಕೂಲ್ ಹೊರಾಂಗಣ ಕ್ರೀಡಾಂಗಣದಲ್ಲಿ ಇಲ್ಲಿನ ಮಯೂರ ಸ್ಕೂಲ್ ಸ್ಪೋರ್ಟ್ಸ್ ಕ್ಲಬ್‌ನಿಂದ ಕ್ರೀಡಾಪಟು ದಿವಂಗತ ಸಂತೋಷ ಖಂಡ್ರಿ ಅವರ ಸ್ಮರಣಾರ್ಥ ಹಮ್ಮಿಕೊಂಡ ಸ್ನೇಹ ಪೂರ್ವ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿಯಾಗಿದ್ದು , ಯುವ ಜನತೆಯು ಕ್ರೀಡೆಗಳನ್ನು ಆಡುವ ಮೂಲಕ ಆರೋಗ್ಯವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ. ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿವಾರಿಸಿ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಗಳು ಪ್ರಯೋಜನಕಾರಿಯಾಗಿವೆ. ಯುವ ವಿದ್ಯಾರ್ಥಿಗಳು ನಿಗ ದಿತ ಬಿಡುವಿನ ವೇಳೆಯಲ್ಲಿ ಕ್ರೀಡೆಗಳನ್ನು ಅಭ್ಯಾಸ ಮಾಡಿ ಕ್ರೀಡಾಮನೋಭಾವ ರೂಢಿಸಿಕೊಂಡು ಸ್ಪರ್ಧಿಸಿ ಆಡಿ ಗೆಲುವು ಪಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಣಿ ಸದಸ್ಯ ಸೂರ್ಯಕಾಂತ ಪಾಟೀಲ, ಅಧ್ಯಕ್ಷ ಗುರುಸಿದಪ್ಪ ಪೂಜೇರಿ, ಕಾರ್ಯದರ್ಶಿ ಸಾದಿಕ ಹಲ್ಯಾಳ, ಪಂದ್ಯಾವಳಿ ಸಂಘಟಕ ರಿಯಾಜ ಮುಲ್ಲಾ, ವಿಜಯ ಹೆಗ್ಗನವರ, ಪದ್ಮರಾಜ ದರಕಶೆಟ್ಟಿ, ರವಿ ಗಂಡಬಾಳೆ ಉಪಸ್ಥಿತರಿದ್ದರು.