ಗೋಕಾಕ:ಸಚಿವ ಸತೀಶ ಜಾರಕಿಹೊಳಿ ಅವರ ಹೇಳಿಕೆ ಸ್ವಾಗತಾರ್ಹವಾಗಿದ್ದು, ಆದಷ್ಟು ಬೇಗ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿಬೇಕು: ಅಶೋಕ ಪೂಜಾರಿ

ಸಚಿವ ಸತೀಶ ಜಾರಕಿಹೊಳಿ ಅವರ ಹೇಳಿಕೆ ಸ್ವಾಗತಾರ್ಹವಾಗಿದ್ದು, ಆದಷ್ಟು ಬೇಗ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿಬೇಕು: ಅಶೋಕ ಪೂಜಾರಿ
ಗೋಕಾಕ ಅ 17 : ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆಯನ್ನು ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿರುವ ಬೆಳಗಾವಿ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಹೇಳಿಕೆ ಸ್ವಾಗತಾರ್ಹವಾಗಿದ್ದು, ಆದಷ್ಟು ಬೇಗ ಇದನ್ನು ಕಾರ್ಯರೂಪಕ್ಕೆ ತಂದು ಬೆಳಗಾವಿ ಜಿಲ್ಲೆಯನ್ನು ವಿಭಜಿಸಿಬೇಕು ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಸರಕಾರವನ್ನು ಆಗ್ರಹಿಸಿದ್ದಾರೆ.
ಗುರುವಾರದಂದು ನಗರದ ತಮ್ಮ ಗೃಹ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಸುಮಾರು 40 ವರ್ಷಗಳಿಂದ ಗೋಕಾಕ ಜಿಲ್ಲೆಯನ್ನಾಗಿಸಬೇಕು ಎಂಬ ಬೇಡಿಕೆ ಇದ್ದು, ಕಾಲಕಾಲಕ್ಕೆ ಸರಕಾರವನ್ನು ಎಚ್ಚರಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಸರಕಾರಗಳು ಸಹ ಬೆಳಗಾವಿ ಜಿಲ್ಲೆಯನ್ನು ಒಯವಿಭಜಿಸುವ ಭರವಸೆಯನ್ನು ನೀಡಿ ಹುಸಿ ಗೊಳಿಸುತ್ತಾ ಬಂದಿದ್ದಾರೆ. ಈಗ ಪ್ರಸ್ತುತ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸತೀಶ ಜಾರಕಿಹೊಳಿ ಮತ್ತು ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆಯನ್ನು ಮಾಡುವ ಒಲವನ್ನು ತೋರುತ್ತಿರುವುದು ಅಭಿವೃದ್ಧಿ ದೃಷ್ಟಿಯಿಂದ ದಿಟ್ಟ ಹೆಜ್ಜೆಯಾಗಿದೆ. ಜಿಲ್ಲೆ ವಿಭಜನೆ ಕಳೆದ 4 ದಶಕಗಳ ಬೇಡಿಕೆಯಾಗಿದ್ದು, ಯಾರ ಒತ್ತಡಕ್ಕೆ ಮಣಿಯದೆ ಬೆಳಗಾವಿ ಅಖಂಡ ಜಿಲ್ಲಾ ವಿಭಜನೆ ಮಾಡಿ ಗೋಕಾಕ ಮತ್ತು ಚಿಕ್ಕೋಡಿ ತಾಲೂಕನ್ನು ಹೊಸ ಜಿಲ್ಲೆಯನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಶೋಕ ಪೂಜಾರಿ ಆಗ್ರಹಿಸಿದ್ದಾರೆ.
ಒಗ್ಗಟ್ಟಾಗಿ ಹೋರಾಟ : ಗೋಕಾಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಕಳೆದ 4 ದಶಕಗಳಿಂದ ಜಿಲ್ಲಾ ಹೋರಾಟ ಸಮಿತಿ ಹಾಗೂ ವಕೀಲರ ಸಂಘ ನೇತೃತ್ವದಲ್ಲಿ ನಗರದ ವಿವಿಧ ಸಂಘಟನೆಗಳು ಸೇರಿ ಗೋಕಾಕ ನೂತನ ಜಿಲ್ಲೆಗಾಗಿ ಹಲವಾರು ಸ್ಥರದ ಹೋರಾಟಗಳನ್ನು ಮಾಡಿದ್ದು, ಈಗಲೂ ಸಹ ವಕೀಲರ ಮತ್ತು ಜಿಲ್ಲಾ ಹೋರಾಟ ಸಮಿತಿ ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮುಂದಿನ ಹೋರಾಟದ ರೂಪರೇಷೆಗಳನ್ನು ಸಿದ್ದಪಡಿಸಿ ಅಕ್ಟೋಬರ್ 2 ರ ಒಳಗೆ ಗೋಕಾಕ ಮತ್ತು ಚಿಕ್ಕೋಡಿ ತಾಲೂಕನ್ನು ಹೊಸ ಜಿಲ್ಲೆ ಮಾಡುವಂತೆ ಆಗ್ರಹಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರೋ. ಪಂಗಣ್ಣವರ, ದಸ್ತಗಿರಿ ಪೈಲವಾನ, ಸಂಜೀವ ಪೂಜಾರಿ ಮತ್ತು ಇತರರು ಉಪಸ್ಥಿತರಿದ್ದರು.