RNI NO. KARKAN/2006/27779|Saturday, February 14, 2026
You are here: Home » breaking news » ಗೋಕಾಕ:ದಿ.03ರಂದು ಎಸ್‍ಎಸ್‍ಎಲ್‍ಸಿ ಹಾಗೂ ದ್ವೀತಿಯ ಪಿಯೂಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸತ್ಕಾರ

ಗೋಕಾಕ:ದಿ.03ರಂದು ಎಸ್‍ಎಸ್‍ಎಲ್‍ಸಿ ಹಾಗೂ ದ್ವೀತಿಯ ಪಿಯೂಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸತ್ಕಾರ 

ದಿ.03ರಂದು ಎಸ್‍ಎಸ್‍ಎಲ್‍ಸಿ ಹಾಗೂ ದ್ವೀತಿಯ ಪಿಯೂಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸತ್ಕಾರ

ಗೋಕಾಕ ಸೆ 1 : ಎಸ್‍ಎಸ್‍ಎಲ್‍ಸಿ ಹಾಗೂ ದ್ವೀತಿಯ ಪಿಯೂಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಉಪ್ಪಾರ ಸಮಾಜದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ರಾಜ್ಯ ಮಟ್ಟದ “ಪ್ರತಿಭಾ ಪುರಸ್ಕಾರ” ಇದೆ ರವಿವಾರ ದಿ.03ರಂದು ನಡೆಯಲಿದೆ ಎಂದು ಗೋಕಾಕ ತಾಲೂಕ ಉಪ್ಪಾರ ಸಂಘದ ಉಪಾಧ್ಯಕ್ಷ ಕುಶಾಲ ಗುಡೇನ್ನವರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಉಪ್ಪಾರ ಸಮಾಜದ ಕುಲಗುರುಗಳು ಹಾಗೂ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳ ನೇತ್ರತ್ವದಲ್ಲಿ ಹೊಸದುರ್ಗದ ಭಗೀರಥ ಪೀಠದಲ್ಲಿ ರವಿವಾರದಂದು ಬೆಳಿಗ್ಗೆ 11ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಜರುಗಲಿದೆ.
ಇದೇ ಸಂದರ್ಭದಲ್ಲಿ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳಿಗೆ, ನಿವೃತ್ತಿಹೊಂದಿದ ಅಧಿಕಾರಿಗಳಿಗೆ, ವಿಷೇಶ ಸಾಧಕರಿಗೆ ಸನ್ಮಾನ ಸಮಾರಂಭ ಮತ್ತು ವನಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಉಪ್ಪಾರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

Related posts: