ಗೋಕಾಕ:ನಗರದಲ್ಲಿ ಯುವಕನ ಬರ್ಬರ ಹತ್ಯೆ, ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ, ನಗರದಲ್ಲಿ ಬಿಗುವಿನ ವಾತಾವರಣ

ನಗರದಲ್ಲಿ ಯುವಕನ ಬರ್ಬರ ಹತ್ಯೆ, ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ, ನಗರದಲ್ಲಿ ಬಿಗುವಿನ ವಾತಾವರಣ
ಗೋಕಾಕ ನ 13 : ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗೋಕಾಕ್ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಕೊಲೆ ಯಾಗುತ್ತಿದ್ದಂತೆ ಅದೇ ಓಣಿಯ ಯುವಕರಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಮನೆಗಳ ಮೇಲೆ ಮೃತನ ಕುಟುಂಬಸ್ಥರು ಕಲ್ಲು ತೂರಿ ಆಕ್ರೋಶ ಹೊರಹಾಕಿದ್ದಾರೆ.
ಶಾನೂರ್ ಅಲಿಯಾಸ್ ಸಂತೋಷ ಪೂಜಾರಿ(25) ಹತ್ಯೆಯಾದ ಯುವಕ. ಐದಾರು ಮಂದಿ ದುಷ್ಕರ್ಮಿಗಳು ಶಾನೂರ್ ಮೇಲೆ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಇದರಿಂದ ಕೆರಳಿದ ಶಾನೂರ್ ಕುಟುಂಬಸ್ಥರು, ಆರೋಪಿಗಳ ಮನೆ ಮೇಲೆ ಕಲ್ಲು ತೂರಿದ್ದು, ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಗೋಕಾಕ್ ಶಹರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಮೂರು ಡಿಆರ್ ತುಕಡಿ, ನಾಲ್ಕು ಮಂದಿ ಸಿಪಿಐ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಕೊಲೆ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯವನ್ನು ಕೈಗೊಂಡಿದ್ದಾರೆ.